ಪುಲ್ವಾಮಾ ದಾಳಿ: ಬಾಂಬರ್ ಗೆ ಆಶ್ರಯ ನೀಡಿದ್ದ ತಂದೆ, ಮಗಳನ್ನು ಬಂಧಿಸಿದ ಎನ್ ಐಎ
ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ.

ಶ್ರೀನಗರ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬಂಧಿಸಿದ ನಾಲ್ಕು ದಿನದ ನಂತರ ಇದೇ ಪ್ರಕರಣದಲ್ಲಿ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಇಂದು ಬಂಧಿಸಿದೆ.
ಪುಲ್ವಾಮಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ.ಲೆತ್ ಪೊರಾ ಪ್ರದೇಶದಲ್ಲಿ ವಾಸಿಸುತ್ತಿದ್ದ ತಂದೆ ಹಾಗೂ ಮಗಳನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳದ ಮೂಲಗಳು ತಿಳಿಸಿವೆ.
ಮತ್ತೆ ಇಬ್ಬರು ಆರೋಪಿಗಳ ಬಂಧನದಿಂದಾಗಿ ಈ ಪ್ರಕರಣದಲ್ಲಿ ಈವರೆಗೂ ಮೂವರನ್ನು ಬಂಧಿಸಲಾಗಿದೆ. ಫೆಬ್ರವರಿ 28 ರಂದು ಶಕಿರ್ ಬಷೀರ್ ಮಾಗ್ರೀ ಎಂಬ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಜೈಷ್-ಇ- ಮೊಹ್ಮದ್ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರೀಯನಾಗಿದ್ದ ಹಾಜಿಬಲ್ ನಿವಾಸಿ ಉಗ್ರ ಮಾಗ್ರೀಯನ್ನು 15 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಜಮ್ಮು- ಕಾಶ್ಮೀರದ ಎನ್ ಐಎ ವಿಶೇಷ ನ್ಯಾಯಾಲಯ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


