ದೇಶ

ವಾದ್ರಾ ಭೂ ಖರೀದಿ ಅಕ್ರಮದಲ್ಲಿ ಭಾಗಿಯಾಗಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರ ಭೂ ಖರೀದಿ ಅಕ್ರಮ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದೆ ಎಂದು ವರದಿಗಳು ತಿಳಿಸಿವೆ.

ವಾದ್ರಾ ಭೂ ಖರೀದಿ ಅಕ್ರಮದಲ್ಲಿ ಭಾಗಿಯಾಗಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಮನೆ ಮೇಲೆ ಐಟಿ ದಾಳಿ
ಸಂಗ್ರಹ ಚಿತ್ರ
Published On :

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರ ಭೂ ಖರೀದಿ ಅಕ್ರಮ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಹರಿಯಾಣ ಮಾಜಿ ಶಾಸಕ ಲಲಿತ್ ನಗರ್ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದೆ ಎಂದು ವರದಿಗಳು ತಿಳಿಸಿವೆ. 

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಲಲಿತ್ ಅವರಿಗೆ ಸೇರಿದ ಕಚೇರಿ ಹಾಗೂ ನಿವಾಸ ಸೇರಿದಂತೆ 6ಕ್ಕೂ ಹೆಚ್ಚು ಪ್ರದೇಶಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. 

ಕೇವಲ ಲಲಿತ್ ಅವರ ನಿವಾಸವಷ್ಟೇ ಅಲ್ಲದೆ, ಸೆಕ್ಟರ್ 17ನಲ್ಲಿರುವ ಲಲಿತ್ ಅವರ ಸಹೋದರರಾದ ಮಹೇಶ್ ನಗರ್, ಮನೋಜ್ ನಗರ್ ಹಾಗೂ ರಾಜು ನಗರ್ ಅವರ ನಿವಾಸಗಳ ಮೇಲೂ ದಾಳಿ ನಡೆದಿದೆ ಎನ್ನಲಾಗುತ್ತಿದೆ. 

ಐಟಿ ದಾಳಿ ವೇಳೆ ಅಧಿಕಾರಿಗಳು ಸ್ಥಳದಲ್ಲಿದ್ದ ಪ್ರತಿಯೊಬ್ಬರ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ತಪಾಸಣೆ ನಡೆಸುತ್ತಿದ್ದಾರೆ. 

ಈ ಹಿಂದೆ ಎರಡು ಬಾರಿ ಲಲಿತ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಲಲಿತ್ ಅವರು ಐಟಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ನಮಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.