ಕೊರೋನಾವೈರಸ್ ಭೀತಿ ಬೇಡ: ಪ್ರಧಾನಮಂತ್ರಿ ನರೇಂದ್ರ ಮೋದಿ
ದೇಶದಲ್ಲಿ ಹೊಸದಾಗಿ ಕೊರೋನಾ ಸೋಂಕಿನಲ್ಲಿ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ನವದೆಹಲಿ: ದೇಶದಲ್ಲಿ ಹೊಸದಾಗಿ ಕೊರೋನಾ ಸೋಂಕಿನಲ್ಲಿ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ವಿವಿಧ ಸಚಿವಾಲಯಗಳ ಮುಖ್ಯಸ್ಥರ ಜೊತೆ ನಡೆಸಿದ ಸಭೆಯಲ್ಲಿ ಕೊರೋನಾ ಸೋಂಕು ಹರಡದಂತೆ ತಡೆಯಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಮತ್ತು ಪರಿಸ್ಥಿತಿ ಎದುರಿಸಲು ಮಾಡಿಕೊಂಡಿರುವ ಸನ್ನದ್ಧ ಸ್ಥಿತಿಯ ಬಗ್ಗೆ ಪ್ರಧಾನಿ ಪರಾಮರ್ಶೆ ನಡೆಸಿದರು.
ಈ ನಡುವೆ ಸಭೆಯ ಬಳಿಕ ಟ್ವೀಟ್ ಮಾಡಿರುವ ಮೋದಿಯವರು, ಕೊರೋನಾ ಸೋಂಕಿನ ಬಗ್ಗೆ ದೇಶವಾಸಿಗಳು ಭಯಭೀತರಾಗಬೇಕಿಲ್ಲ ಎಂದು ಹೇಳಿದ್ದಾರೆ.
ನಾವು ಒಟ್ಟಾಗಿ ಕಲಸ ಮಾಡಬೇಕಾಗಿದೆ. ಸ್ವಯಂ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸಣ್ಣ ಮತ್ತು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬೇಕು. ವೈರಸ್ ತಡೆಗಟ್ಟುವ ಬಗ್ಗೆ ಸಭೆ ನಡೆಸಿ ಪರಾಮರ್ಶೆ ನಡೆಸಿದ್ದೇನೆ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


