ಗುರುಗ್ರಾಮ್ ಪೇಟಿಎಂ ಉದ್ಯೋಗಿಗೆ ಕೊರೋನಾ ವೈರಸ್ ಪಾಸಿಟಿವ್, ಮನೆಯಿಂದ ಕೆಲಸ ಮಾಡುವಂತೆ ಎಲ್ಲಾ ಸಿಬ್ಬಂದಿಗೆ ಸೂಚನೆ
ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯು ತನ್ನ ಎಲ್ಲಾ ಸಿಬ್ಬಂದಿಗೂ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಗುರುಗ್ರಾಮ್: ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯು ತನ್ನ ಎಲ್ಲಾ ಸಿಬ್ಬಂದಿಗೂ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.
ಇತ್ತೀಚಿಗೆ ಇಟಲಿಯಲ್ಲಿ ರಜೆ ಕಳೆದ ಬಂದ ಕಂಪನಿಯ ಉದ್ಯೋಗಿಯೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡು ಬಂದಿದ್ದು, ಮುಂದಿನ ಎರಡು ದಿನಗಳ ಕಾಲ ಮನೆಯಿಂದ ಕೆಲಸ ಮಾಡುವಂತೆ ಎಲ್ಲಾ ಸಿಬ್ಬಂದಿಗೂ ಸೂಚಿಸಿರುವುದಾಗಿ ಪೇಟಿಎಂ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. 29 ಪ್ರಕರಣಗಳ ಪೈಕಿ 17 ಪ್ರಕರಣಗಳು ಜೈಪುರದಲ್ಲಿಯೇ ಪತ್ತೆಯಾಗಿದ್ದು, 16 ಇಟಲಿ ಪ್ರವಾಸಿಗರಲ್ಲಿ ಹಾಗೂ ಓರ್ವ ಭಾರತದ ಚಾಲಕನಲ್ಲಿ ಮಾರಣಾಂತಿಕ ಸೋಂಕು ಪತ್ತೆಯಾಗಿದೆ.
ವಿದೇಶದಿಂದ ಬರುವ ಪ್ರತೀಯೊಬ್ಬರೂ ತಪಾಸಣೆಗೊಳಗಾಗಲಿದ್ದಾರೆ. ನಿನ್ನೆಯವರೆಗೂ ನಾವು ಒಟ್ಟು 5.89 ಲಕ್ಷ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದೇವೆ. ಪ್ರಮುಖ ಹಾಗೂ ಸಣ್ಣ ಬಂದರುಗಳಲ್ಲಿ 15 ಸಾವಿರಕ್ಕೂ ಹೆಚ್ಚು ಮತ್ತು ನೇಪಾಳ ಗಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸುಮಾರು 27 ಸಾವಿರ ಜನರ ಮೇಲೆ ಕಣ್ಗಾವಲಿರಿಸಲಾಗಿದೆ. ದೇಶದಾದ್ಯಂತ ಈ ವರೆಗೂ 28 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 28 ಮಂದಿಯ ಪೈಕಿ ಮೂವರು ಕೇರಳ, ದೆಹಲಿ, ತೆಲಂಗಾಣದಲ್ಲಿ ಒಬ್ಬೊಬ್ಬರು, ಆಗ್ರಾದಲ್ಲಿ 6, ಇಟಲಿಯಿಂದ ಭಾರತ ಪ್ರವಾಸಕ್ಕೆ ಬಂದಿರುವ 17 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ತಿಳಿಸಿದ್ದಾರೆ.
ವಿಶ್ವದಾದ್ಯಂತ ಸುಮಾರು 3, 100 ಜನರ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಸೋಂಕು ಹರಡದಂತೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


