ಔರಂಗಬಾದ್ ವಿಮಾನ ನಿಲ್ದಾಣ ಛತ್ರಪತಿ ಸಂಭಾಜಿ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ
ಔರಂಗಬಾದ್ ವಿಮಾನ ನಿಲ್ದಾಣವನ್ನು ಛತ್ರಪತಿ ಸಂಭಾಜಿ ಮಹಾರಾಜ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಮುಂಬೈ: ಔರಂಗಬಾದ್ ವಿಮಾನ ನಿಲ್ದಾಣವನ್ನು ಛತ್ರಪತಿ ಸಂಭಾಜಿ ಮಹಾರಾಜ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.
ಇಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಬಾದ್ ವಿಮಾನ ನಿಲ್ದಾಣಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ರ ಸಂಭಾಜಿ ಮಹಾರಾಜ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕೈಗಾರಿಕಾ ಸಚಿವ ಸುಭಾಶ್ ದೇಸಾಯಿ ಅವರು, ಮಹಾ ವಿಕಾಸ ಅಘಾಡಿ ಸರ್ಕಾರ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದರು.
ಔರಂಗಬಾದ್ ವಿಮಾನ ನಿಲ್ದಾಣಕ್ಕೆ ಛತ್ರಪತಿ ಸಂಭಾಜಿ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಒಪ್ಪಿಗೆಗಾಗಿ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


