ಕೊರೋನಾವೈರಸ್: ಭಾರತದಲ್ಲಿ 30ಕ್ಕೇರಿದ ಸೋಂಕಿತರ ಸಂಖ್ಯೆ, ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಿಕೆ, ಪ್ರಧಾನಿ ಮೋದಿ ಬ್ರಸೆಲ್ಸ್ ಭೇಟಿ ರದ್ದು
ವಿಶ್ವದಾದ್ಯಂತ ಕೊರೋನವೈರಸ್ ಏಕಾಏಕಿ ಉಲ್ಪಣಿಸುತ್ತಿದ್ದು, ಭಾರತದಲ್ಲಿ ಈ ವರೆಗೂ ಮಾರಕ ಸೋಂಕಿಗೆ ತುತ್ತಾಗಿರುವವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಿಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬ್ರಸೆಲ್ಸ್ ಭೇಟಿ ಕೂಡ ರದ್ದಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ವಿಶ್ವದಾದ್ಯಂತ ಕೊರೋನವೈರಸ್ ಏಕಾಏಕಿ ಉಲ್ಪಣಿಸುತ್ತಿದ್ದು, ಭಾರತದಲ್ಲಿ ಈ ವರೆಗೂ ಮಾರಕ ಸೋಂಕಿಗೆ ತುತ್ತಾಗಿರುವವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಿಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬ್ರಸೆಲ್ಸ್ ಭೇಟಿ ಕೂಡ ರದ್ದಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, 'ವಿಶ್ವದಾದ್ಯಂತ ಕೊರೋನವೈರಸ್ ಏಕಾಏಕಿ ಉಲ್ಪಣಿಸುತ್ತಿರುವ ಹಿನ್ನೆಲೆಯಲ್ಲಿ ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ ಮುಂದೂಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ಭೇಟಿ ರದ್ದಾಗಿದೆ. ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆಗೆ ಪ್ರಧಾನಿ ಮೋದಿ ಹಾಜರಾಗಬೇಕಾಗಿತ್ತು. ಆದರೆ, ಸದ್ಯ ಪ್ರಯಾಣ ಬೆಳೆಸದಂತೆ ಎರಡೂ ದೇಶಗಳ ಆರೋಗ್ಯ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೃಂಗಸಭೆಯನ್ನು ಪರಸ್ಪರ ಅನುಕೂಲಕರ ದಿನಾಂಕದಂದು ಮರು ನಿಗದಿಪಡಿಸಲು ನಿರ್ಧರಿಸಲಾಗಿದೆ' ಎಂಬುದಾಗಿ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಐರೋಪ್ಯ ಒಕ್ಕೂಟ ಮತ್ತು ಭಾರತದ ನಡುವಿನ ನಿಕಟ ಸಹಕಾರದ ಸ್ಫೂರ್ತಿಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಭಾರತ ಮತ್ತು ಐರೋಪ್ಯ ದೇಶಗಳು ಜಾಗತಿಕ ಆರೋಗ್ಯದ ಬಗ್ಗೆ ಸಮಾಣ ಕಾಳಜಿ ಮತ್ತು ಬದ್ಧತೆಯನ್ನು ಹಂಚಿಕೊಳ್ಳುತ್ತವೆ. ಮತ್ತು ಸೋಂಕು ಶೀಘ್ರವೇ ನಿಯಂತ್ರಣಕ್ಕೆ ಬರಲೆಂದು ಆಶಿಸುತ್ತವೆ ಎಂದು ಅವರು ಹೇಳಿದ್ದಾರೆ.
ಐರೋಪ್ಯ ಆಯೋಗ, ಐರೋಪ್ಯ ಮಂಡಳಿ ಮತ್ತು ಐರೋಪ್ಯ ಸಂಸತ್ ಸೇರಿದಂತೆ ಅದರ ಅನೇಕ ಸಂಸ್ಥೆಗಳಿಗೆ ಬ್ರಸೆಲ್ಸ್ ನೆಲೆಯಾಗಿದೆ. ಐರೋಪ್ಯ ಸಂಸತ್ತು ಈಗಾಗಲೇ ಬ್ರಸೆಲ್ಸ್ ಮತ್ತು ಸ್ಟ್ರಾಸ್‌ಬರ್ಗ್‌ನಲ್ಲಿನ ತನ್ನ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಾರಣಾಂತಿಕ ವೈರಸ್ ಇದುರವರೆಗೆ ವಿಶ್ವದಾದ್ಯಂತ ಸುಮಾರು 3,200 ಜನರನ್ನು ಬಲಿ ತೆಗೆದುಕೊಂಡಿದೆ. ಚೀನಾದ ವುಹಾನ್‌ನಲ್ಲಿ ಮೊದಲು ಉಲ್ಬಣಗೊಂಡ ನಂತರ ವಿಶ್ವದಾದ್ಯಂತ 90,000 ಕ್ಕೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದಾರೆ.
ಉತ್ತರ ಪ್ರದೇಶಕ್ಕೂ ಹಬ್ಬಿದ ಕೊರೋನಾ: ಭಾರತದಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆ
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ವ್ಯಕ್ತಿಯೋರ್ವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ರಾಜಧಾನಿ ದೆಹಲಿ, ಕೇರಳ, ಜೈಪುರ ಮತ್ತು ಹೈದರಾಬಾದ್ ನಲ್ಲೂ ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ 30 ಸೋಂಕಿತರ ಪೈಕಿ 16 ಮಂದಿ ಇಟಲಿಯಿಂದ ಬಂದ ಪ್ರವಾಸಿಗರಾಗಿದ್ದು, ಕೇರಳದ ಮೂವರು ಸೋಂಕಿತರು ಗುಣಮುಖರಾಗಿದ್ದಾರೆ. ಮಾರಣಾಂತಿಕ ವೈರಸ್ಗೆ ಜಗತ್ತಿನಾದ್ಯಂತ ಸುಮಾರು 3,300 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 92 ಸಾವಿರ ಗಡಿ ದಾಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


