ದೇಶ

ಐಬಿ ಅಧಿಕಾರಿ ಕೊಲೆ ಆರೋಪಿ ಮಾಜಿ ಎಎಪಿ ಮುಖಂಡ ತಾಹೀರ್ ಹುಸೇನ್ ಬಂಧನ!

ಸಿಎಎ ಸಂಬಂಧ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹೀರ್ ಹುಸೇನ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಐಬಿ ಅಧಿಕಾರಿ ಕೊಲೆ ಆರೋಪಿ ಮಾಜಿ ಎಎಪಿ ಮುಖಂಡ ತಾಹೀರ್ ಹುಸೇನ್ ಬಂಧನ!
ತಾಹೀರ್ ಹುಸೇನ್
Published On :

ನವದೆಹಲಿ: ಸಿಎಎ ಸಂಬಂಧ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹೀರ್ ಹುಸೇನ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಗೀಡಾಗಿದ್ದರು. ಈ ಆರೋಪದ ಮೇಲೆ ತಾಹೀರ್ ಹುಸೇನ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಾಗಿತ್ತು. 

ಅಂಕಿತ್ ಶರ್ಮಾ ಹತ್ಯೆ ಹಿಂದೆ ತಾಹೀರ್ ಕೈವಾಡ ಇದೆ ಎಂದು ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತಾಹೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇನ್ನು ತಾಹೀರ್ ವಿರುದ್ಧ ಕೊಲೆ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿತ್ತು. 

ತಾಹೀರ್ ಮನೆಯ ಐದನೇ ಅಂತಸ್ತಿನ ಕಟ್ಟಡದ ಮಹಡಿಯಿಂದ ಕಲ್ಲು ಮತ್ತು ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.