ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್ ಸಂಸದರ ಅಮಾನತು
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.
ಕಾಂಗ್ರೆಸ್ ನ ಸಂಸದರಾದ ಗೌರವ್ ಗೊಗೊಯಿ, ಟಿ.ಎನ್.ಪ್ರತಾಪನ್, ಮಾಣಿಕಂ ಟಾಗೋರ್, ಗುರ್ಜೀತ್ ಸಿಂಗ್ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉನ್ನಿತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಸತತ ಎಚ್ಚರಿಕೆ ಹೊರತಾಗಿಯೂ ಸದನದಲ್ಲಿ ಅಶಿಸ್ತಿನಿಂದ ವರ್ತನೆ ತೋರಿದ ಕಾರಣ 7 ಸಂಸದರನ್ನು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.
ಇನ್ನು ಸಂಸದರ ಅಮಾನತು ಆದೇಶವನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಪಾಸ್ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


