ದೇಶ

ಮಹಿಳಾ ದಿನಾಚರಣೆ: ಮಹಾರಾಷ್ಟ್ರ ಬಾಲಕಿಯರಿಗೆ 1 ದಿನದ ಮಟ್ಟಿಗೆ ಡಿಸಿ ಆಗುವ ಅವಕಾಶ

ಮಹಿಳಾ ದಿನಾಚರಣೆಗೆ ಮುನ್ನ ಆದರ್ಶ ಕ್ರಮವೊಂದನ್ನು ಮಹಾರಾಷ್ಟ್ರ ಸರ್ಕಾರ ಕೈಗೊಂಡಿದ್ದು, ಪ್ರತಿಭಾವಂತ ಬಾಲಕಿಯರಿಗೆ 1 ದಿನದ ಮಟ್ಟಿಗೆ ಜಿಲ್ಲಾಧಿಕಾರಿಯಾಗುವ ಸದಾವಕಾಶವನ್ನು ಕಲ್ಪಿಸಿಕೊಟ್ಟಿದೆ.

ಮಹಿಳಾ ದಿನಾಚರಣೆ: ಮಹಾರಾಷ್ಟ್ರ ಬಾಲಕಿಯರಿಗೆ 1 ದಿನದ ಮಟ್ಟಿಗೆ ಡಿಸಿ ಆಗುವ ಅವಕಾಶ
ಸಂಗ್ರಹ ಚಿತ್ರ
Published On :

ನಾಗ್ಪುರ: ಮಹಿಳಾ ದಿನಾಚರಣೆಗೆ ಮುನ್ನ ಆದರ್ಶ ಕ್ರಮವೊಂದನ್ನು ಮಹಾರಾಷ್ಟ್ರ ಸರ್ಕಾರ ಕೈಗೊಂಡಿದ್ದು, ಪ್ರತಿಭಾವಂತ ಬಾಲಕಿಯರಿಗೆ 1 ದಿನದ ಮಟ್ಟಿಗೆ ಜಿಲ್ಲಾಧಿಕಾರಿಯಾಗುವ ಸದಾವಕಾಶವನ್ನು ಕಲ್ಪಿಸಿಕೊಟ್ಟಿದೆ. 

ಬುಲ್ದಾಣಾ ಜಿಲ್ಲಾಡಳಿತ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದು, ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ಮೆಚ್ಚುಗೆಗಳು ವ್ಯಕ್ತವಾಗತೊಡಗಿವೆ. 

ಮಹಿಳಾ ದಿನಾಚರಣೆಯ ದಿನದಂತು ಪ್ರತಿಭಾವಂತ ಬಾಲಕಿಯರು 1 ದಿನದ ಮಟ್ಟಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಹಾಗೂ ಗುರಿ ಸಾಧಿಸಲು ಪ್ರೇರಣ ತುಂಬಲು ಈ ವಿನೂತನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಅಯೋಜಿಸಿದೆ ಎಂದು ವರದಿಗಳು ತಿಳಿಸಿವೆ. 

ಜಿಲ್ಲಾಡಳಿತ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಸಾಮಾಜಿ, ಇತರೆ ವಿಷಯಗಳನ್ನ ಹೇಗೆ ನಿರ್ವಹಿಸಬೇಕು ಎಂಬುದನ್ನು ಈ ವೇಳೆ ವಿದ್ಯಾರ್ಥಿನಿಯರಿಗೆ ತಿಳಿಸಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.