ವಿಶ್ವಕ್ಕೆ ಕಂಟಕವಾದ ಕೊರೋನಾ ವೈರಸ್: ಪ್ರಧಾನಿ ಮೋದಿ ಬ್ರುಸೆಲ್ಸ್ ಪ್ರವಾಸ ರದ್ದು
ಚೀನಾ ಬಳಿಕ ಇಡೀ ವಿಶ್ವಕ್ಕೆ ಕೊರೋನಾ ವೈರಸ್ ಕಂಟಕವಾಗಿ ಪರಿಣಮಿಸಿದ್ದು, ವೈರಾಣುವಿನ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ರುಸೆಲ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ನವದೆಹಲಿ: ಚೀನಾ ಬಳಿಕ ಇಡೀ ವಿಶ್ವಕ್ಕೆ ಕೊರೋನಾ ವೈರಸ್ ಕಂಟಕವಾಗಿ ಪರಿಣಮಿಸಿದ್ದು, ವೈರಾಣುವಿನ ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ರುಸೆಲ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಕೊರೋನಾ ವೈರಸ್ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಷ್ಟ್ರಗಳೂ ಪ್ರವಾಸಗಳನ್ನು ಕೈಗೊಳ್ಳದಂತೆ ನಿರ್ಧಾರ ಕೈಗೊಂಡಿವೆ. ಹೀಗಾಗಿ ಮೋದಿಯವರ ಬ್ರುಸೆಲ್ಸ್ ಪ್ರವಾಸವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ, ಅಲ್ಲದೆ, ಭಾರತ-ಐರೋಪ್ಯ ಒಕ್ಕೂಟ ಶೃಂಗದ ದಿನಾಂಕವನ್ನು ಬದಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿದ್ದು ಈ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


