ದೇಶ

ಹಿರಿಯ ನಟಿ-ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್

ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಹಿರಿಯ ನಟಿ-ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್
ಜಯಪ್ರದಾ
Published On :

ಉತ್ತರ ಪ್ರದೇಶ: ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಕಳೆದ 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವ ಕಾರಣ 57 ವರ್ಷದ ಬಿಜೆಪಿ ನಾಯಕಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಹಾಕಲಾಗಿದೆ.

ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಮ್ ಪುರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂಖಾನ್ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲನುಭವಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.