ದೇಶ

ಕೇರಳದ ಐವರಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢ

ಕೇರಳದ ಐವರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಸಚಿವೆ ಆರ್ ಕೆ ಶೈಲಜಾ ಹೇಳಿದ್ದಾರೆ.

ಕೇರಳದ ಐವರಲ್ಲಿ ಕೊರೋನಾ ವೈರಸ್ ಪಾಸಿಟಿವ್ ದೃಢ
ಸಾಂದರ್ಭಿಕ ಚಿತ್ರ
Published On :

ತಿರುವನಂತಪುರಂ: ಕೇರಳದ ಐವರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಸಚಿವೆ ಆರ್ ಕೆ ಶೈಲಜಾ ಹೇಳಿದ್ದಾರೆ.

ಈ ಐವರು ಪಥ್ನಮತ್ತಟ್ಟ ಜಿಲ್ಲೆಗೆ ಸೇರಿದವರಾಗಿದ್ದಾರೆ. ಈ ಪೈಕಿಯಲ್ಲಿ ಮೂವರು  ಫೆಬ್ರವರಿ 29 ರಂದು ಇಟಲಿಯಿಂದ ವಾಪಾಸ್ ಬಂದವರಾಗಿದ್ದರೆ  ಇನ್ನಿಬ್ಬರು ಅವರ ಸಂಬಂಧಿಕರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. 

ಶನಿವಾರ ರಾತ್ರಿ ಮಾಡಿಸಲಾದ ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಪ್ರಥಮ ಬಾರಿಗೆ ಎಂಬಂತೆ ಕೇರಳದಿಂದಲೇ ಮೂರು ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದವು.

ಚೀನಾದ ವುಹಾನ್ ನಿಂದ ತಾಯ್ನಾಡಿಗೆ ಆಗಮಿಸಿದ್ದ ಮೂವರು  ವೈದ್ಯಕೀಯ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಿದಾಗ ಕೊರೋನಾ ಸೋಂಕು ಪತ್ತೆಯಾಗಿತ್ತು. ನಂತರ ಆಸ್ಪತ್ರೆಯಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.