ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸಾಮಾಜಿಕ ಜಾಲತಾಣ ಬಿಟ್ಟುಕೊಟ್ಟ ಪ್ರಧಾನಿ ನರೇಂದ್ರ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಂತೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಾಮಾಜಿಕ ಜಾಲತಾಣಗಳಿಂದ ತಾತ್ಕಾಲಿಕವಾಗಿ ದೂರ ಉಳಿದಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಗೈದ ಮಹಿಳಾ ಮಣಿಯರಿಗೆ ತಮ್ಮ ಟ್ವಿಟರ್ ಖಾತೆಯ ನಿರ್ವಹಣೆ ಬಿಟ್ಟುಕೊಟ್ಟಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಹೇಳಿದಂತೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಾಮಾಜಿಕ ಜಾಲತಾಣಗಳಿಂದ ತಾತ್ಕಾಲಿಕವಾಗಿ ದೂರ ಉಳಿದಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಗೈದ ಮಹಿಳಾ ಮಣಿಯರಿಗೆ ತಮ್ಮ ಟ್ವಿಟರ್ ಖಾತೆಯ ನಿರ್ವಹಣೆ ಬಿಟ್ಟುಕೊಟ್ಟಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ದೇಶದ ಎಲ್ಲ ಮಹಿಳೆಯರಿಗೆ ಶುಭ ಕೋರಿದ್ದು, ಈ ಹಿಂದಿನ ತಮ್ಮ ಮಾತನ್ನು ನೆನಪು ಮಾಡಿಕೊಳ್ಳುತ್ತಾ, ನಾನು ಸಾಮಾಜಿಕ ಜಾಲತಾಣಗಳ ದೂರ ಉಳಿಯುತ್ತಿದ್ದೇನೆ. ನನ್ನ ಟ್ವಿಟರ್ ಖಾತೆಯ ನಿರ್ವಹಣೆಯನ್ನು ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಗೈದ ಮಹಿಳಾ ಮಣಿಯರಿಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಇಂದಿನ ಮಟ್ಟಿಗೆ ತಮಿಳುನಾಡು ಮೂಲದ ಮಾಳವಿಕ ಅಯ್ಯರ್ ಅವರು ನಿರ್ವಹಣೆ ಮಾಡುತ್ತಿದ್ದಾರೆ. ಎರಡು ಕೈಗಳು ಇಲ್ಲದಿದ್ದರೂ ಪಿ.ಹೆಚ್.ಡಿ ಮಾಡಿದ ಅಪರೂಪದ ಛಲಗಾತಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


