ನಿರ್ಭಯ ಪ್ರಕರಣ: ಜೀವದಾನಕ್ಕಾಗಿ ಲೆಫ್ಟಿನೆಂಟ್ ಗೌರ್ನರ್ ಮೊರೆ ಹೋದ ಅಪರಾಧಿ
ನಿರ್ಭಯ ಪ್ರಕರಣದ ಅಪರಾಧಿಗಳಿಗೆ ಕಾನೂನಿನ ಎಲ್ಲಾ ಬಾಗಿಲು ಮುಚ್ಚಿದ್ದರೂ, ಮರಣದಂಡನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.

ನವದೆಹಲಿ: ನಿರ್ಭಯ ಪ್ರಕರಣದ ಅಪರಾಧಿಗಳಿಗೆ ಕಾನೂನಿನ ಎಲ್ಲಾ ಬಾಗಿಲು ಮುಚ್ಚಿದ್ದರೂ, ಮರಣದಂಡನೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ.
ಅಪರಾಧಿ ವಿನಯ್ ಶರ್ಮ ಪರ ವಕೀಲ ಎಪಿ ಸಿಂಗ್ ತನ್ನ ಕಕ್ಷಿದಾರನ ಮರಣದಂಡನೆಯ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಕೆ ಮಾಡಬೇಕೆಂದು ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಗೆ ಮನವಿ ಸಲ್ಲಿಸಿದ್ದಾರೆ.
ಸಿಆರ್ ಪಿಸಿ ಸೆಕ್ಷನ್ 432 ಹಾಗೂ 433 ಅಡಿಯಲ್ಲಿ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಸಕಾರಾತ್ಮಕ ಸುಧಾರಣೆ, ವಯಸ್ಸು, ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಪರಿಗಣಿಸಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬೇಕೆಂದು ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


