ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು: ಶಿವರಾಜ್ ಸಿಂಗ್ ಚೌಹ್ಹಾಣ್ ಭೇಟಿಯಾದ ಬಿಎಸ್ಪಿ, ಎಸ್ ಪಿ ಶಾಸಕರು
ಆಡಳಿತರೂಢ ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗುತ್ತಿದ್ದಂತೆ ಸಮಾಜವಾದಿ ಹಾಗೂ ಬಿಎಸ್ಪಿ ಶಾಸಕರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ಭೂಪಾಲ್: ಆಡಳಿತರೂಢ ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯಪ್ರದೇಶ ಸರ್ಕಾರದಲ್ಲಿ ಬಿಕ್ಕಟ್ಟು ಉಂಟಾಗುತ್ತಿದ್ದಂತೆ ಸಮಾಜವಾದಿ ಹಾಗೂ ಬಿಎಸ್ಪಿ ಶಾಸಕರು ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹ್ಹಾಣ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.
ಬಿಎಸ್ಪಿಯ ಇಬ್ಬರು ಹಾಗೂ ಎಸ್ ಪಿಯ ಒಬ್ಬ ಶಾಸಕರು ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಬಿಎಸ್ಪಿ ಶಾಸಕ ಕುಶ್ವಾಹಾದ ಭಿಂದ್ ಸಂಜೀವ್ ಸಿಂಗ್ ಹಾಗೂ ಮೆಹಗಾಂವ್ ಎಸ್ಪಿ ಶಾಸಕ ರಾಜೀಶ್ ಶುಕ್ಲಾ , ಚೌಹ್ಹಾಣ್ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಶಿವರಾಜ್ ಸಿಂಗ್ ಚೌಹ್ಹಾಣ್, ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಇದೊಂದು ಔಪಾಚಾರಿಕ ಭೇಟಿಯಾಗಿದೆ ಎಂದು ತಿಳಿಸಿದರು.
ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬಂತಹ ಕಾಂಗ್ರೆಸ್ ಆರೋಪದ ಮಧ್ಯೆ ಶುಕ್ಲಾ ಹಾಗೂ ಕುಶ್ವಾಹಾ ಅವರ ಮೊಬೈಲ್ ಫೋನ್ ಕಳೆದೆರಡು ವಾರಗಳಿಂದ ಸ್ವಿಚ್ ಆಫ್ ಆಗಿತ್ತು. ಮಾರ್ಚ್ 4ರಂದು ಭೂಪಾಲ್ ಗೆ ಮರಳಿದ ಈ ಇಬ್ಬರು ಶಾಸಕರು, ತಮ್ಮ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಆರೋಪವನ್ನು ತಳ್ಳಿಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


