ದೇಶ

ಮಧ್ಯಪ್ರದೇಶ: ಆರು ಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಕಮಲ್ ನಾಥ್ ಪತ್ರ

ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ನಡುವೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನಿಷ್ಠೆ ತೋರಿರುವ ಆರು ಸಚಿವರನ್ನು ಉಚ್ಛಾಟಿಸುವಂತೆ ಕೋರಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಂಗಳವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರಿಗೆ ಪತ್ರ ಬರೆದಿದ್ದಾರೆ.

ಮಧ್ಯಪ್ರದೇಶ: ಆರು ಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಕಮಲ್ ನಾಥ್ ಪತ್ರ
ಕಮಲ್ ನಾಥ್
Published On :

ಭೂಪಾಲ್ :  ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ನಡುವೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನಿಷ್ಠೆ ತೋರಿರುವ ಆರು ಸಚಿವರನ್ನು ಉಚ್ಛಾಟಿಸುವಂತೆ ಕೋರಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಂಗಳವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವರಾದ ಇಮ್ರಾತಿ ದೇವಿ, ತುಳಸಿ ಸಿಲಾವತ್, ಗೋವಿಂದ್ ಸಿಂಗ್ ರಜಪೂತ್, ಮಹೇಂದ್ರಸಿಂಗ್ ಸಿಸೋಡಿಯಾ, ಪ್ರದ್ಯುಮನ್ ಸಿಂಗ್ ತೋಮರ್ ಮತ್ತು ಪ್ರಭುರಾಮ್ ಚೌಧರಿ ಅವರನ್ನು ತಕ್ಷಣವೇ ಉಚ್ಛಾಟಿಸುವಂತೆ ಕಮಲ್ ನಾಥ್ ಅವರು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ

ಈ ಮಧ್ಯೆ, 21 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶ ವಿಧಾನಸಭೆಗೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಇವರೆಲ್ಲರೂ ಬೆಂಗಳೂರಿನ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.