ದೇಶ

ದೆಹಲಿ ಗಲಭೆ: ಅಮಾನತುಗೊಂಡ ಆಪ್ ಕೌನ್ಸಿಲರ್ ತಹಿರ್ ಹುಸೇನ್ ಸಹೋದರನ ಬಂಧನ

ಕಳೆದ ತಿಂಗಳು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾನತುಗೊಂಡ ಎಎಪಿ ಕೌನ್ಸಿಲರ್ ತಹಿರ್ ಹುಸೇನ್ ಅವರ ಸಹೋದರನನ್ನು ಮಂಗಳವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಗಲಭೆ: ಅಮಾನತುಗೊಂಡ ಆಪ್ ಕೌನ್ಸಿಲರ್ ತಹಿರ್ ಹುಸೇನ್ ಸಹೋದರನ ಬಂಧನ
ಶಾಹ್ ಆಲಂ
Published On :

ನವದೆಹಲಿ: ಕಳೆದ ತಿಂಗಳು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಅಮಾನತುಗೊಂಡ ಎಎಪಿ ಕೌನ್ಸಿಲರ್ ತಹಿರ್ ಹುಸೇನ್ ಅವರ ಸಹೋದರನನ್ನು ಮಂಗಳವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ತಹಿರ್ ಹುಸೇನ್ ಸಹೋದರ ಶಾಹ್ ಆಲಂನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಆಲಂಗೆ ಆಶ್ರಯ ನೀಡಿದ ಆರೋಪದ ಮೇಲೆ ಇತರೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಿರ್ ಹುಸೇನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾರೆ. 

ತನಿಖೆಯ ವೇಳೆ ಆಲಂ ಹೆಸರು ಸಹ ಕೇಳಿಬಂದಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.