18 ತಿಂಗಳಲ್ಲಿ ಕಾಂಗ್ರೆಸ್ ನಿಂದ ನನ್ನ ಕನಸು ನುಚ್ಚು ನೂರು, ದೇಶ ಸುರಕ್ಷಿತವಾದ ಕೈಗಳಲ್ಲಿದೆ: ಸಿಂಧಿಯಾ
ಕಾಂಗ್ರೆಸ್ ಈ ಹಿಂದಿದ್ದಂತಿಲ್ಲ, 18 ತಿಂಗಳಲ್ಲಿ ಆ ಪಕ್ಷ ನನನ್ ಕನಸುಗಳನ್ನು ನುಚ್ಚು ನೂರು ಮಾಡಿದೆ ಎಂದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಈ ಹಿಂದಿದ್ದಂತಿಲ್ಲ, 18 ತಿಂಗಳಲ್ಲಿ ಆ ಪಕ್ಷ ನನ್ನ ಕನಸುಗಳನ್ನು ನುಚ್ಚು ನೂರು ಮಾಡಿದೆ ಎಂದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಜ್ಯೋತಿರಾದಿತ್ಯ ಸಿಂಧಿಯಾ, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದ ಭವಿಷ್ಯ ಸುಭದ್ರವಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನೊಂದಿಗೆ ತಮ್ಮ ಸುದೀರ್ಘ ನಂಟಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ಕಾಂಗ್ರೆಸ್ ನಲ್ಲಿ ಜನರ ಸೇವೆ ಮಾಡಲು ಸಾಧ್ಯವಾಗದೇ ನೊಂದಿದ್ದೆ, ಮಧ್ಯಪ್ರದೇಶಕ್ಕಾಗಿ ತಾವು ತಮ್ಮ ತಂಡದೊಂದಿಗೆ ಕಟ್ಟಿದ್ದ ಕನಸನ್ನು 18 ತಿಂಗಳಲ್ಲಿ ಕಾಂಗ್ರೆಸ್ ನುಚ್ಚು ನೂರು ಮಾಡಿತು. ಬಿಜೆಪಿ ಕುಟುಂಬಕ್ಕೆ ಆಹ್ವಾನಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸುತ್ತೇನೆ, ನನಗೆ ಜನಸೇವೆ ಮಾಡುವುದಕ್ಕೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ ಎಂದು ಸಿಂಧಿಯಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


