ದೇಶ

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ, ರಾಜ್ಯಸಭೆಗೆ ಆಯ್ಕೆ ಸಾಧ್ಯತೆ

ನಿನ್ನೆಯಷ್ಟೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ, ರಾಜ್ಯಸಭೆಗೆ ಆಯ್ಕೆ ಸಾಧ್ಯತೆ
ಸಿಂಧಿಯಾ ಬಿಜೆಪಿ ಸೇರ್ಪಡೆ
Published On :

ನವದೆಹಲಿ: ನಿನ್ನೆಯಷ್ಟೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದು, ಕೇಸರಿ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನೇತೃತ್ವದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬಿಜೆಪಿ ಸೇರ್ಪಡೆಯಾದರು.

ಬಿಜೆಪಿ ಸಿಂಧಿಯಾ ಅವರನ್ನು ಮಧ್ಯ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡಿ, ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಈ ಮಧ್ಯೆ, ಸಿಂಧಿಯಾ ಬಿಜೆಪಿ ಸೇರ್ಪಡೆಗೆ, ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರ ಕೆಲವು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡಿರುವ 19 ಶಾಸಕರ ಪೈಕಿ ಇಬ್ಬರು ಸಚಿವರು ಸೇರಿದಂತೆ ಕನಿಷ್ಠ 12 ಶಾಸಕರು ಸಿಂಧಿಯಾ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ. ನಿನ್ನೆ ಸಿಂಧಿಯಾ ಅವರು ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವ ವಿಚಾರ ಇದೀಗ ಸಿಂಧಿಯಾ ಕ್ಯಾಂಪ್ ನಲ್ಲಿ ಬಿರುಕಿಗೆ ಕಾರಣವಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.