ಮಧ್ಯಪ್ರದೇಶ ಬಿಕ್ಕಟ್ಟು: ಸಿಂಧಿಯಾ ಕ್ಯಾಂಪ್‌ನಲ್ಲಿ ಬಿರುಕು, ಬಹುಮತ ಸಾಬೀತು ವಿಶ್ವಾಸದಲ್ಲಿ ಕಮಲ್‌ನಾಥ್!
ಹೋಳಿಯಂದೆ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧಿಯಾ ಅವರು ರಾಜಿನಾಮೆಯಿಂದಾಗಿ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆದಿತ್ತು.

ಭೋಪಾಲ್: ಹೋಳಿಯಂದೆ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾಧಿತ್ಯ ಸಿಂಧಿಯಾ ಅವರು ರಾಜಿನಾಮೆಯಿಂದಾಗಿ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆದಿತ್ತು.
ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ. ನಿನ್ನೆ ಸಿಂಧಿಯಾ ಅವರು ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ಇದೀಗ ಸಿಂಧಿಯಾ ಕ್ಯಾಂಪ್ ನಲ್ಲಿ ಬಿರುಕಿಗೆ ಕಾರಣವಾಗಿದೆ ಎನ್ನಲಾಗಿದೆ.
ಮಧ್ಯಪ್ರದೇಶ ಕಾಂಗ್ರೆಸ್ನ ಪ್ರಮುಖ ಮೂಲಗಳ ಪ್ರಕಾರ, ಬೆಂಗಳೂರಿನ 19 ಶಾಸಕರೊಂದಿಗೆ ಪಕ್ಷದ ನಾಯಕರು ಸಂಪರ್ಕದಲ್ಲಿದ್ದು ಸಿಂಧಿಯಾ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದಕ್ಕೆ ಕನಿಷ್ಠ 10 ಶಾಸಕರು ಮತ್ತು ಇಬ್ಬರು ಮಂತ್ರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನುಳಿದ 12 ಶಾಸಕರಿಗೆ 1996ರಲ್ಲಿ ತಂದೆ ಮಾಧವರಾವ್ ಬಿಜೆಪಿ ಸೇರುವ ಬದಲು ಹೊಸ ಪಕ್ಷ ಸ್ಥಾಪಿಸಿದಂತೆ ಜ್ಯೋತಿರಾಧಿತ್ಯ ಸಿಂಧಿಯಾ ಸಹ ಮಾಡಲಿ ಎಂಬ ಅಭಿಪ್ರಾಯ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಾಹಿತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೆ ಪುಟಿದೇಳುವ ವಿಶ್ವಾಸ ವ್ಯಕ್ತಪಡಿಸಿದೆ.
ಇದೇ ಮಾರ್ಚ್ 16ರಂದು ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಿದೆ. ಈ ಎಲ್ಲಾ ಬಿಕ್ಕಟ್ಟಿನ ನಂತರವೂ ಕಮಲ್ ನಾಥ್ ಅವರು ಬಹುಮತ ಸಾಬೀತು ಮಾಡಿಯೇ ಸಿದ್ದ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


