ದೇಶ

ಮಧ್ಯಪ್ರದೇಶ ಬಿಕ್ಕಟ್ಟು: 12 ಕಾಂಗ್ರೆಸ್ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್, ನಾಳೆಯೊಳಗೆ ಪ್ರತಿಕ್ರಿಯೆಗೆ ಸೂಚನೆ 

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ ವಿಧಾನಸಭೆ ಸ್ಪೀಕರ್ ಎನ್. ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಮಧ್ಯಪ್ರದೇಶ ಬಿಕ್ಕಟ್ಟು: 12 ಕಾಂಗ್ರೆಸ್ ಬಂಡಾಯ ಶಾಸಕರಿಗೆ ಸ್ಪೀಕರ್ ನೋಟಿಸ್, ನಾಳೆಯೊಳಗೆ ಪ್ರತಿಕ್ರಿಯೆಗೆ ಸೂಚನೆ 
ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು
Published On :

ಭೂಪಾಲ್ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಧ್ಯಪ್ರದೇಶದ 12 ಕಾಂಗ್ರೆಸ್ ಬಂಡಾಯ ಶಾಸಕರುಗಳಿಗೆ 
ವಿಧಾನಸಭೆ ಸ್ಪೀಕರ್ ಎನ್. ಪಿ. ಪ್ರಜಾಪತಿ ನೋಟಿಸ್ ನೀಡಿದ್ದು, ನಾಳೆಯೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆಯೇ ಅಥವಾ ಬಲವಂತದಿಂದ ರಾಜೀನಾಮೆ ನೀಡಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸ್ಪೀಕರ್ ಸೂಚಿಸಿರುವುದಾಗಿ ವಿಧಾನಸಭೆಯ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಈ ಮಧ್ಯೆ ಮಾರ್ಚ್16 ರಂದು ಬಿಜೆಪಿ ವಿಶ್ವಾಸ ಮತ ಯಾಚನೆಗೆ ಕೋರಿದ್ದು, 22 ಶಾಸಕರ ನಿರ್ಧಾರದ ಆಧಾರದ ಮೇಲೆ ವಿಶ್ವಾಸ ಮತ ಯಾಚಿಸಲು ಸಿದ್ಧವಿರುವುದಾಗಿ ಕಾಂಗ್ರೆಸ್ ಹೇಳಿದೆ. 

ರಾಜೀನಾಮೆ ನೀಡಿರುವ ಆರು ಸಚಿವರು ಸೇರಿದಂತೆ 22 ಶಾಸಕರುಗಳಿಗೆ ಸ್ಪೀಕರ್ ಪ್ರಜಾಪತಿ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದು, ಸ್ಪೀಕರ್ ಅವರನ್ನು ಭೇಟಿ ಮಾಡಿ ಏಕೆ ರಾಜೀನಾಮೆ ಸಲ್ಲಿಸಲಿಲ್ಲ ಎಂಬುದು ಗೊತ್ತಾಗಬೇಕಾಗಿದೆ ಎಂದಿದ್ದಾರೆ.

ಕೇಂದ್ರದ ಮಾಜಿ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಂಗಳವಾರ ಪಕ್ಷ ತೊರೆದ ಬೆನ್ನಲ್ಲೇ, 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವುದರಿಂದ 15 ತಿಂಗಳ ಆಡಳಿತ ನಡೆಸಿರುವ ಕಮಲ್ ನಾಥ್ ಸರ್ಕಾರ ತೀವ್ರ ಬಿಕ್ಕಟ್ಟು ಎದುರಿಸುವಂತಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.