ಮಧ್ಯಪ್ರದೇಶ ಬಿಕ್ಕಟ್ಟು: ಬಿಜೆಪಿ ವರಿಷ್ಠರನ್ನು ಭೇಟಿಯಾದ ಸಿಂಧಿಯಾ, ಮಾ. 16ರಂದು ವಿಶ್ವಾಸ ಮತ ಬಯಸಿದ ಕೇಸರಿ ಪಕ್ಷ
22 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 16 ರಂದು ಮಧ್ಯಪ್ರದೇಶ ಬಿಜೆಪಿ ವಿಶ್ವಾಸ ಮತವನ್ನು ಕೋರಲಿದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ಇಂದು ತಿಳಿಸಿದ್ದಾರೆ.

ಭೂಪಾಲ್: 22 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಮಾರ್ಚ್ 16 ರಂದು ಮಧ್ಯಪ್ರದೇಶ ಬಿಜೆಪಿ ವಿಶ್ವಾಸ ಮತವನ್ನು ಕೋರಲಿದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ಇಂದು ತಿಳಿಸಿದ್ದಾರೆ.
ಜ್ಯೂತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷಕ್ಕೆ ಮಂಗಳವಾರ ರಾಜೀನಾಮೆ ನೀಡಿದ ಬಳಿಕ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, 14 ತಿಂಗಳ ಕಮಲ್ ನಾಥ್ ನೇತೃತ್ವದ ಸರ್ಕಾರ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ.
ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಮಾರ್ಚ್ 16ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಂದೇ ವಿಶ್ವಾಸ ಮತಕ್ಕೆ ರಾಜ್ಯಪಾಲರು ಹಾಗೂ ಸ್ಪೀಕರ್ ಅವರನ್ನು ಮನವಿ ಮಾಡಲಾಗುವುದು ಎಂದು ಮಧ್ಯಪ್ರದೇಶ ವಿಧಾನಸಭೆ ಬಿಜೆಪಿ ಮುಖ್ಯ ಸಚೇತಕ ನಾರೊಟ್ಟಮ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
22 ಶಾಸಕರು ರಾಜೀನಾಮೆ ನೀಡಿರುವುದು ರಾಜ್ಯಪಾಲರು ಹಾಗೂ ಸ್ಪೀಕರ್ ಗೆ ಗೊತ್ತಿದೆ. ಇದೀಗ ಅವರಿಗೆ ಕರೆ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ತಿಳಿಸಿದ್ದಾರೆ. 228 ಸದಸ್ಯ ಬಲದ ವಿಧಾನಸಭೆಯಲ್ಲಿ ಬಂಡಾಯಕ್ಕೂ ಮುನ್ನ ಕಾಂಗ್ರೆಸ್ 114 ಸದಸ್ಯರನ್ನು ಹೊಂದಿತ್ತು. ಅಲ್ಲದೇ ನಾಲ್ವರು ಪಕ್ಷೇತರು, ಇಬ್ಬರು ಬಿಎಸ್ಪಿ ಶಾಸಕರು ಹಾಗೂ ಒಬ್ಬರು ಎಸ್ಪಿ ಶಾಸಕರು ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಆದರೆ, ಇದೀಗ ಅವರು ಕೂಡಾ ಬಿಜೆಪಿ ಕಡೆಗೆ ವಾಲುವ ಸಾಧ್ಯತೆ ಹೆಚ್ಚಾಗಿದೆ.
22 ಕಾಂಗ್ರೆಸ್ ಶಾಸಕರ ರಾಜೀನಾಮೆ ಸಿಂಧೂವಾದರೆ ವಿಧಾನಸಭೆ ಸದಸ್ಯರ ಬಲ 206ಕ್ಕೆ ಕುಸಿಯಲಿದೆ. ಕಾಂಗ್ರೆಸ್ 92, ಬಿಜೆಪಿ 107 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಮ್ಯಾಜಿಕ್ ನಂಬರ್ ಸಂಖ್ಯೆ 104 ಆಗಿದೆ.
ಮತ್ತೊಂದೆಡೆ ಜ್ಯೋತಿರಾಧಿತ್ಯ ಸಿಂಧಿಯಾ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ತಮ್ಮ ಸೇರ್ಪಡೆಯಿಂದ ಮಧ್ಯಪ್ರದೇಶದಲ್ಲಿ ಕೇಸರಿ ಪಕ್ಷವನ್ನು ಬಲಗೊಳಿಸಲು ಸಾಧ್ಯವಾಗಲಿದೆ ಎಂಬ ಭರವಸೆ ನೀಡಿದ್ದಾರೆ. ಔಪಚಾರಿಕವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಿಂಧಿಯಾ ಭೇಟಿಯಾಗಿದ್ದಾರೆ.
ಸಿಂಧಿಯಾ ಬಿಜೆಪಿ ಸೇರ್ಪಡೆಯಿಂದ ಮಧ್ಯಪ್ರದೇಶದಲ್ಲಿ ಪಕ್ಷ ಬಲಗೊಳ್ಳಲಿದ್ದು,ಜನತೆಯ ಸೇವೆ ಮಾಡಲಿದ್ದಾರೆ ಎಂಬ ಬಲವಾದ ನಂಬಿಕೆ ಹೊಂದಿರುವುದಾಗಿ ಸಿಂಧಿಯಾ ಭೇಟಿ ಬಳಿಕ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಮಧ್ಯಪ್ರದೇಶದಿಂದ ಬಿಜೆಪಿ ಪಕ್ಷದಿಂದ ಸಿಂಧಿಯಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


