ದೇಶ

ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಸಮಯವಿದು: ಅಜಯ್ ಮಕೇನ್ 

ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.

ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಸಮಯವಿದು: ಅಜಯ್ ಮಕೇನ್ 
ಅಜಯ್ ಮಕೇನ್
Published On :

ನವದೆಹಲಿ: ಪಕ್ಷಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು ಈ ಪರೀಕ್ಷೆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ನಿಂತು ಪಕ್ಷಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಅಭಿಪ್ರಾಯಪಟ್ಟಿದ್ದಾರೆ.


ಒಂದು ಕಾಲದಲ್ಲಿ ರಾಹುಲ್ ಗಾಂಧಿಯವರ ಆಪ್ತ ಎಂದು ಗುರುತಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂದಿಯಾ ಅವರು ಬಿಜೆಪಿಗೆ ಸೇರಿದ ನಂತರ ಈ ಪ್ರತಿಕ್ರಿಯೆ ನೀಡಿದ್ದಾರೆ. ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್ ಜೊತೆಗಿನ ತಮ್ಮ 18 ವರ್ಷಗಳ ಸಖ್ಯ ತೊರೆದಿದ್ದಾರೆ.


ಇಂದು ಕಾಂಗ್ರೆಸ್ ಗೆ ತೀವ್ರ ಕಷ್ಟದ ಪರಿಸ್ಥಿತಿ ಎದುರಾಗಿದೆ. ಕೆಲವು ಶಕ್ತಿಗಳು ದೇಶವನ್ನು ಒಂದಾಗಿ ಇರಿಸಲು ನೋಡುವ ಪಕ್ಷವನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ನ ತತ್ವ, ಸಿದ್ದಾಂತಗಳನ್ನು ಪಾಲಿಸುವ ಜನರು ಈ ಅಗ್ನಿಪರೀಕ್ಷೆಯ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲುವ ಸಮಯವಿದು ಎಂದು ಹೇಳಿಕೆಯಲ್ಲಿ ಮಕೇನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.