ದೇಶ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 73: ಆರೋಗ್ಯ ಸಚಿವಾಲಯ

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 73: ಆರೋಗ್ಯ ಸಚಿವಾಲಯ
ಸಂಗ್ರಹ ಚಿತ್ರ
Published On :

ನವದೆಹಲಿ: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಭಾರತದಲ್ಲಿ ಒಟ್ಟು 73 ಮಂದಿ ತುತ್ತಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಕುರಿತಂತೆ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದ್ದು, ಈ ಸೋಂಕಿತರ ಪಟ್ಟಿಯಲ್ಲಿ ಭಾರತದಲ್ಲಿರುವ ವಿದೇಶಿಗರೂ ಕೂಡ ಸೇರಿದ್ದಾರೆ ಎಂದು ಹೇಳಿದೆ.

ಈ ಪೈಕಿ ಹರ್ಯಾಣದಲ್ಲಿ 14 ಮಂದಿ ವಿದೇಶಿಗರು, ದೆಹಲಿಯಲ್ಲಿ 6 ಮಂದಿ ಭಾರತೀಯರು, ಕೇರಳದಲ್ಲಿ 17 ಮಂದಿ, ರಾಜಸ್ಥಾನ ಮೂರು (1 ಭಾರತೀಯ, 2 ವಿದೇಶಿಗರು), ತೆಲಂಗಾಣ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ ಮತ್ತು  ಪಂಜಾಬ್ ನಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಂಡುಬಂದಿದೆ.

ಅಂತೆಯೇ ಉತ್ತರ ಪ್ರದೇಶದಲ್ಲಿ 10 ಮಂದಿ ಭಾರತೀಯರು ಮತ್ತು ಓರ್ವ ವಿದೇಶಿಗ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಢಾಕ್ ನಲ್ಲಿ 3 ಮಂದಿ, ಕರ್ನಾಟಕದಲ್ಲಿ ನಾಲ್ಕು ಮಂದಿ, ಮಹಾರಾಷ್ಟ್ರದಲ್ಲಿ 11 ಮಂದಿ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ದೇಶದಲ್ಲಿ 73 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 56 ಮಂದಿ ಭಾರತೀಯರು ಮತ್ತು 17 ಮಂದಿ ವಿದೇಶಿಗರು ಇದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.