ಬಂಡಾಯ ಶಾಸಕರ ಮನವೊಲಿಸಲು ಬಂದವರ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪ
ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಎದ್ದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 6 ಸಚಿವರು ಸೇರಿದಂತೆ 20 ಮಂದಿ ಕಾಂಗ್ರೆಸ್ ಶಾಸಕರನ್ನು ಮನವೊಲಿಸಿ ಕರೆದೊಯ್ಯಲು ಆಗಮಿಸಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರ ಮೇಲೆ ಬೆಂಗಳೂರಿನಲ್ಲಿ ಗುರುವಾರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಬೆಂಗಳೂರು/ಭೋಪಾಲ್ : ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಎದ್ದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 6 ಸಚಿವರು ಸೇರಿದಂತೆ 20 ಮಂದಿ ಕಾಂಗ್ರೆಸ್ ಶಾಸಕರನ್ನು ಮನವೊಲಿಸಿ ಕರೆದೊಯ್ಯಲು ಆಗಮಿಸಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರ ಮೇಲೆ ಬೆಂಗಳೂರಿನಲ್ಲಿ ಗುರುವಾರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಕಾಂಗ್ರೆಸ್ ಶಾಸಕರನ್ನು ಕರೆದೊಯ್ಯಲು ಬಂದ ಸಚಿವ ಸಚಿವ ಜೀತು ಪತ್ವಾರಿ ಅವರನ್ನು ದೇವನಹಳ್ಳಿ ಬಳಿಯ ರೆಸಾರ್ಟ್ ನಲ್ಲಿ ಪೊಲೀಸರ ಸಮ್ಮುಖದಲ್ಲೇ ಹಲ್ಲೆ ನಡೆಸಿ ವಾಪಸ್ ಕಳುಹಿಸಿರುವುದಾಗಿ ತಿಳಿದು ಬಂದಿದೆ. ಈ ಬೆಳವಣಿಗೆ ನಂತರ ಭೋಪಾಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ನಾಯಕರು, ಬೆಂಗಳೂರಿಗೆ ಭೇಟಿ ನೀಡಿದ್ದ ತಮ್ಮ ಪಕ್ಷದ ಸಚಿವರಾದ ಜೀತು ಪತ್ವಾರಿಯವರನ್ನು ಪೊಲೀಸರು ಬಂಧಿಸಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪತ್ವಾರಿಯವರೊಂದಿಗೆ ಪೊಲೀಸರು ಮಾತಿನ ಚಕಮಕಿ ನಡೆಸುತ್ತಿರುವ ವಿಡಿಯೋ ದೃಶ್ಯಗಳನ್ನು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತೋರಿಸಿದರು.
ಪೊಲೀಸರು ಪತ್ವಾರಿಯವರನ್ನು ಬಲವಂತದಿಂದ ಬಸ್ ನಲ್ಲಿ ಕರೆದೊಯ್ಯುತ್ತಿರುವ ಮತ್ತೊಂದು ವಿಡಿಯೋ ದೃಶ್ಯವನ್ನು ಕಾಂಗ್ರೆಸ್ ನಾಯಕರು ಮಾಧ್ಯಮಗಳ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಿದ್ದಾರೆ.ಬೆಂಗಳೂರಿಗೆ ತೆರಳಿದ್ದ ಮಧ್ಯಪ್ರದೇಶ ಸಚಿವರಾದ ಲಖನ್ ಸಿಂಗ್ ಮತ್ತು ಶಾಸಕರೊಬ್ಬರ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ರಾಜ್ಯಸಭಾ ಸದಸ್ಯ ಮತ್ತು ಹಿರಿಯ ವಕೀಲ ವಿವೇಕ್ ತಂಕಾ, ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ಕಾಂಗ್ರೆಸ್ ನ ರಾಜ್ಯ ಮಾಧ್ಯಮ ವಿಭಾಗದ ಶೋಭಾ ಓಜಾ ಸಹ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಪತನಗೊಳಿಸುವ ಕುರಿತು ಜ್ಯೋತಿರಾಧಿತ್ಯ ಸಿಂಧಿಯಾ ಅವರ ಸಂಚಿನ ಭಾಗವಾಗಿ ಕಾಂಗ್ರೆಸ್ ನ ಸುಮಾರು 20 ಶಾಸಕರು ಕಳೆದೊಂದು ವಾರದಿಂದ ಬೆಂಗಳೂರಿನ ವಿವಿಧ ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿ ಬೀಡುಬಿಟ್ಟಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ಈ ಶಾಸಕರನ್ನು ಮತ್ತೆ ಪಕ್ಷದ ತೆಕ್ಕೆಗೆ ತೆಗೆದುಕೊಳ್ಳುವ ಕಾರ್ಯತಂತ್ರದ ಭಾಗವಾಗಿ ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಬೆಂಗಳೂರಿಗೆ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


