ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆ: ನೊಯ್ಡಾ ಮೂಲದ ಕಂಪೆನಿಯ ಉದ್ಯೋಗಿಯಲ್ಲಿ ಪತ್ತೆ
ಭಾರತದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 81ಕ್ಕೇರಿದೆ. ಬೆಂಗಳೂರಿನಲ್ಲಿ ಗ್ರೀಸ್ ನಿಂದ ಬಂದಿದ್ದ ಗೂಗಲ್ ಕಂಪೆನಿ ಉದ್ಯೋಗಿ ಮತ್ತು ನೊಯ್ಡಾದಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರಲ್ಲಿ ಕೊರೊನಾ ದೃಢಪಟ್ಟಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಾಣು ಸೋಂಕಿತರ ಸಂಖ್ಯೆ 81ಕ್ಕೇರಿದೆ. ಬೆಂಗಳೂರಿನಲ್ಲಿ ಗ್ರೀಸ್ ನಿಂದ ಬಂದಿದ್ದ ಗೂಗಲ್ ಕಂಪೆನಿ ಉದ್ಯೋಗಿ ಮತ್ತು ನೊಯ್ಡಾದಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ.
ನೊಯ್ಡಾದ ಕಂಪೆನಿಯ ವ್ಯಕ್ತಿ ಫ್ರಾನ್ಸ್ ಮತ್ತು ಚೀನಾ ಪ್ರವಾಸ ಮಾಡಿ ಬಂದಿದ್ದರು. ಅವರು ದೆಹಲಿ ನಿವಾಸಿಯಾಗಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಪಡೆದವರಲ್ಲಿ ಭಾರತದಲ್ಲಿ ನಾಲ್ವರು ರೋಗಿಗಳು ಗುಣಮುಖರಾಗುತ್ತಿದ್ದು, ದುಬೈಯಿಂದ ಬಂದ ಕಲಬುರಗಿಯ ವೃದ್ಧ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಯಾವ ರಾಜ್ಯದಲ್ಲಿ ಎಷ್ಟು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂಬ ಅಂಕಿಅಂಶ ಬಿಡುಗಡೆಮಾಡಿದೆ. ಕೇರಳದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗಿದೆ.

ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎಲ್ಲಾ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಜನರು ಗುಂಪಾಗಿ ಸಾರ್ವಜನಿಕವಾಗಿ ಸೇರುವುದನ್ನು ತಡೆಯುವುದು ಇದಕ್ಕೆ ಬಹಳ ಮುಖ್ಯ ಮುನ್ನೆಚ್ಚರಿಕೆ ಕ್ರಮವಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ದೆಹಲಿಯ ಜವಾಹರ ನೆಹರೂ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 31ರವರೆಗೆ ಎಲ್ಲಾ ತರಗತಿ, ಪರೀಕ್ಷೆಗಳನ್ನು, ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಎಲ್ಲಾ ಸೆಮಿನಾರ್, ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಕಳೆದ ಮಾರ್ಚ್ 5ರಂದು ಕೋಲ್ಕತ್ತಾಕ್ಕೆ ಆಗಮಿಸಿರುವ ಇಟಲಿಯ ದಂಪತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


