ದೇಶ

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ

ದೇಶದಲ್ಲಿ ಮಾರಕ ಕೊರೋನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಟಾಪ್ ನಲ್ಲಿದ್ದರೆ ಮಹಾರಾಷ್ಟ್ರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ.

100ಕ್ಕೆ ಏರಿದ ಕೊರೋನಾವೈರಸ್ ಪಾಸಿಟಿವ್: ಎಲ್ಲಾ ಭೂ ಗಡಿ ಪ್ರವೇಶ ನಿರ್ಬಂಧಿಸಿದ ಭಾರತ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಸೋಂಕಿನ ಪಾಸಿಟಿವ್  ಪ್ರಕರಣಗಳ  ಸಂಖ್ಯೆ 100ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಟಾಪ್ ನಲ್ಲಿದ್ದರೆ ಮಹಾರಾಷ್ಟ್ರದಲ್ಲಿ 9 ಪ್ರಕರಣಗಳು ದೃಢಪಟ್ಟಿವೆ.

ಈ ಮಧ್ಯೆ ತೆಲಂಗಾಣದಲ್ಲಿ ಎರಡನೇ ಪ್ರಕರಣ ದಾಖಲಾಗಿದೆ. ಇಟಲಿಯಿಂದ ವಾಪಸ್ಸಾಗಿದ್ದ  ವ್ಯಕ್ತಿಯೊಬ್ಬರನ್ನು ಹೈದ್ರಾಬಾದಿನ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೇ ಇನ್ನೆರಡು ಶಂಕಿತ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ. ರಕ್ತದ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

 ತೆಲಂಗಾಣದಲ್ಲಿ ಕೊರೋನಾ ವೈರಾಣು ಪಾಸಿಟಿವ್ ಕಂಡುಬಂದಿದ್ದ 24 ವರ್ಷದ ಟೆಕ್ಕಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಟ್ ಮಾಡಲಾಗಿದೆ. 

ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪಟ್ಟಿಯಲ್ಲಿರುವ ಕೆಲವೊಂದು ಚೆಕ್ ಪೋಸ್ಟ್ ಗಳನ್ನು ಹೊರತುಪಡಿಸಿ ಭಾರತ-ಬಾಂಗ್ಲಾದೇಶ, ಭಾರತ-ನೇಪಾಳ, ಭಾರತ-ಭೂತಾನ್, ಭಾರತ-ಮ್ಯಾನ್ಮಾರ್ ಗಡಿಗಳಲ್ಲಿನ ಎಲ್ಲಾ ಭೂ ಚೆಕ್ ಪೋಸ್ಟ್‌ಗಳ ಮೂಲಕ ಮಾರ್ಚ್ 15 ರ ಬೆಳಿಗ್ಗೆ 12 ರಿಂದ ಪ್ರಯಾಣಿಕರ ಸಂಚಾರವನ್ನು ನಿರ್ಬಂಧಿಸಲಾಗುವುದು, ಭಾರತ-ಪಾಕಿಸ್ತಾನ ಗಡಿಯಲ್ಲಿ  ಮಾರ್ಚ್ 16 ರಂದು ಬೆಳಿಗ್ಗೆ 12 ರಿಂದ ಪ್ರಯಾಣಿಕರ ಸಂಚಾರವನ್ನು  ನಿರ್ಬಂಧಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.