ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಭೋಪಾಲ್ ತಲುಪಿದ ಕಾಂಗ್ರೆಸ್ ಶಾಸಕರು
ಮಧ್ಯಪ್ರದೇಶದ ರಾಜ್ಯಪಾಲರು ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಬಹುಮತ ಸಾಬೀತಪಡಿಸುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ ರೆಸಾರ್ಟ್'ಗಳಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು, ಭಾನುವಾರ ಭೂಪಾಲ್'ಗೆ ಮರಳಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ರಾಜ್ಯಪಾಲರು ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೆ ಬಹುಮತ ಸಾಬೀತಪಡಿಸುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ ರೆಸಾರ್ಟ್'ಗಳಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು, ಭಾನುವಾರ ಭೂಪಾಲ್'ಗೆ ಮರಳಿದ್ದಾರೆ.
ತೀವ್ರ ಭದ್ರತೆ ಮೂಲಕ ಜೈಪುರ ರೆಸಾರ್ಟ್ ನಿಂದ ಕಾಂಗ್ರೆಸ್ ಶಾಸಕರು ಭೋಪಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಇದೀಗ ಭೋಪಾಲ್'ನ ಕೆಲ ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಾಂಗ್ರೆಸ್ ಹಿರಿಯ ನಾಯಕ ಹರೀಶ್ ರಾವತ್ ಜೊತೆಗೆ ಬಂದಿರುವ ಎಲ್ಲಾ ಕಾಂಗ್ರೆಸ್ ನಾಯಕರು ವಿಶ್ವಾಸ ಮತದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಗೆ ವಿಶ್ವಾಸಮತದಿಂದ ಭಯ ಶುರುವಾಗಿದೆ. ವಿಶ್ವಾಸಮತಕ್ಕೆ ನಾವು ಸಿದ್ಧರಿದ್ದೇವೆ. ಗೆಲ್ಲುವ ವಿಶ್ವಾಸ ಕೂಡ ನಮಗಿದೆ ಎಂದು ರಾವತ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


