ಕರ್ತಾರ್ಪುರ್ ಯಾತ್ರೆಗೂ ತಟ್ಟಿದ ಕೊರೋನಾ ಬಿಸಿ, ಸೋಮವಾರದಿಂದ ಗುರುದ್ವಾರ ಪ್ರವಾಸ ಬಂದ್ ಮಾಡಿ ಕೇಂದ್ರ ಆದೇಶ
ಕೊರೋನಾವೈರಸ್ ಕಾರಣದಿಂದಾಗಿ ಪಾಕಿಸ್ತಾನದ ಗುರುದ್ವಾರ ಕರ್ತಾರ್ಪುರ್ ಸಾಹಿಬ್ ಅವರ ಪ್ರಯಾಣ ಮತ್ತು ನೋಂದಣಿಯನ್ನು ಕೇಂದ್ರ , ಗೃಹ ವ್ಯವಹಾರಗಳ ಸಚಿವಾಲಯ ಸೋಮವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ನವದೆಹಲಿ: ಕೊರೋನಾವೈರಸ್ ಕಾರಣದಿಂದಾಗಿ ಪಾಕಿಸ್ತಾನದ ಗುರುದ್ವಾರ ಕರ್ತಾರ್ಪುರ್ ಸಾಹಿಬ್ ಅವರ ಪ್ರಯಾಣ ಮತ್ತು ನೋಂದಣಿಯನ್ನು ಕೇಂದ್ರ , ಗೃಹ ವ್ಯವಹಾರಗಳ ಸಚಿವಾಲಯ ಸೋಮವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
"ಕೋವಿಡ್-19 ಹಿನ್ನೆಲೆಯಲ್ಲಿ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಕರ್ತಾರ್ಪುರ್ ಸಾಹಿಬ್ ಪ್ರಯಾಣ ಮತ್ತು ನೋಂದಣಿಯನ್ನು ತಾತ್ಕಾಲಿಕವಾಗಿ 2020 ರ ಮಾರ್ಚ್ 16 ಮುಂಜಾನೆ 12 ರಿಂದ ಅಮಾನತುಗೊಳಿಸಲಾಗಿದೆ" ಗೃಹ ವ್ಯವಹಾರಗಳ ಸಚಿವಾಲಯದ ವಕ್ತಾರರು ಟ್ವೀಟ್ ಮೂಲಕ ಹೇಳಿದ್ದಾರೆ.
ಕೋವಿಡ್=19 ಹರಡುವುದನ್ನು ನಿಯಂತ್ರಿಸಲು ಸರ್ಕಾರವು ಗಡಿಯಲ್ಲಿ ಚೆಕ್‌ಪೋಸ್ಟ್‌ಗಳ ಮೂಲಕ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಚಾರವನ್ನು ನಿರ್ಬಂಧಿಸಿದೆ.
ಬಾಂಗ್ಲಾದೇಶ, ನೇಪಾಳ, ಭೂತಾನ್, ಮ್ಯಾನ್ಮಾರ್‌ನ ಗಡಿಯಲ್ಲಿರುವ ಚೆಕ್ ಪೋಸ್ಟ್‌ಗಳ ಮೂಲಕ ಎಲ್ಲಾ ಪ್ರಯಾಣಿಕರ ಸಂಚಾರವನ್ನು ಮಾರ್ಚ್ 15 ರಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗುವುದು ಎಂದು ಸಚಿವಾಲಯ ಕಳೆದ ವಾರ ತಿಳಿಸಿತ್ತು. ಈ ಅಧಿಸೂಚನೆಯಿಂದ ವಿನಾಯಿತಿ ಪಡೆದ ಚೆಕ್ ಪೋಸ್ಟ್‌ಗಳ ಪಟ್ಟಿಯನ್ನು ಸಚಿವಾಲಯ ಬಿಡುಗಡೆ ಮಾಡಿದೆ.
ವಿಶ್ವ ಆರೋಗ್ಯ ಸಂಸ್ಥೆ ಕೊರೋನಾವೈರಸ್ ಒಂದು ಜಾಗತಿಕ ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


