ದೇಶ

ಕೊರೋನಾ ವಿರುದ್ಧ ತುರ್ತು ಕ್ರಮಕ್ಕೆ ಸಾರ್ಕ್ ವಿಡಿಯೋ ಕಾನ್ಫರೆನ್ಸ್‌: ಮೋದಿಗೆ ಮುಖಾಮುಖಿಯಾಗದ ಇಮ್ರಾನ್ ಖಾನ್!

ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬದಲಿಗೆ ತಮ್ಮ ಸಚಿವಾಲಯದ ಆರೋಗ್ಯ ಸಚಿವರನ್ನು ಕಳುಹಿಸಿದ್ದರು.

ಕೊರೋನಾ ವಿರುದ್ಧ ತುರ್ತು ಕ್ರಮಕ್ಕೆ ಸಾರ್ಕ್ ವಿಡಿಯೋ ಕಾನ್ಫರೆನ್ಸ್‌: ಮೋದಿಗೆ ಮುಖಾಮುಖಿಯಾಗದ ಇಮ್ರಾನ್ ಖಾನ್!
ನರೇಂದ್ರ ಮೋದಿ
Published On :

ನವದೆಹಲಿ: ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬದಲಿಗೆ ತಮ್ಮ ಸಚಿವಾಲಯದ ಆರೋಗ್ಯ ಸಚಿವರನ್ನು ಕಳುಹಿಸಿದ್ದರು. 

ಸಾರ್ಕ್ ರಾಷ್ಟ್ರಗಳಾದ ಆಫ್ಘಾನಿಸ್ತಾನದಿಂದ ಅಧ್ಯಕ್ಷ ಆಶ್ರಫ್ ಗನಿ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ, ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಮತ್ತು ಪಾಕಿಸ್ತಾನದಿಂದ ಆರೋಗ್ಯ ಸಚಿವ ಜಾಫರ್ ಮಿರ್ಜಾ ವಿಡಿಯೋ ಕಾನ್ಪರೆನ್ಸ್ ನಲ್ಲಿ ಮಾತನಾಡಿದ್ದರು. 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಿದ್ದ ಈ ವಿಡಿಯೋ ಕಾನ್ಪರೆನ್ಸ್ ನಲ್ಲಿ ಸಾರ್ಕ್ ದೇಶದ ಪ್ರಧಾನಿ ಅಥವಾ ಅಧ್ಯಕ್ಷರು ಭಾಗಿಯಾಗಿದ್ದರು. ಆದರೆ ಪಾಕಿಸ್ತಾನದಿಂದ ಮಾತ್ರ ಆರೋಗ್ಯ ಸಚಿವರು ಭಾಗಿಯಾಗಿದ್ದಾರೆ. 

ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೊರೋನಾ ವೈರಸ್ ಕುರಿತಂತೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಕೆಲ ಮಾಹಿತಿ ಮತ್ತು ಚರ್ಚೆಗಳು ನಡೆದವು. 

ಭಾರತದ ಜೊತೆ ಉತ್ತಮ ಭಾಂದವ್ಯ ವೃದ್ಧಿಸಲು ನಾವು ಸದಾ ಮುಂದೆ ಎಂದು ಹೇಳಿಕೊಳ್ಳುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತ್ರ ನರೇಂದ್ರ ಮೋದಿ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ ನಿಂದ ಗೈರಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.