'ಭಯಪಡಬೇಡಿ, ತಯಾರಾಗಿ' ಕೊರೋನಾ ವಿರುದ್ಧದ ಹೋರಾಟಕ್ಕೆ ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಮಂತ್ರ!
ಜಗತ್ತಿನಾದ್ಯಂತ 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕೊರೋನ ವೈರಸ್ ವಿರುದ್ಧ ಹೋರಾಡಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರ್ಕ್ ರಾಷ್ಟ್ರಗಳ ಪ್ರತಿನಿಧಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು.

ನವದೆಹಲಿ: ಜಗತ್ತಿನಾದ್ಯಂತ 5000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕೊರೋನ ವೈರಸ್ ವಿರುದ್ಧ ಹೋರಾಡಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಾರ್ಕ್ ರಾಷ್ಟ್ರಗಳ ಪ್ರತಿನಿಧಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದರು.
ತಮ್ಮ ಆರಂಭಿಕ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, ದಕ್ಷಿಣ ಏಷ್ಯಾ ಪ್ರದೇಶದಲ್ಲಿ 150ಕ್ಕಿಂತ ಕಡಿಮೆ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ, ಆದರೆ "ನಾವು ಜಾಗರೂಕರಾಗಿರಬೇಕು" ಎಂದು ಹೇಳಿದರು.
ಕೊರೋನ ವೈರಸ್ ವಿರುದ್ಧ ಏಕಾಏಕಿ ಹೋರಾಡಲು ಭಾರತದ ಮಾರ್ಗದರ್ಶಿ ಮಂತ್ರ "ತಯಾರಾಗಿ, ಆದರೆ ಭಯಪಡಬೇಡಿ" ಎಂದು ಅವರು ಸಾರ್ಕ್ ರಾಷ್ಟ್ರಗಳಿಗೆ ಹೇಳಿದರು.
"ನಾವು ಜನವರಿಯ ಮಧ್ಯದಿಂದಲೇ ವಿದೇಶಗಳಿಂದ ಭಾರತಕ್ಕೆ ಪ್ರವೇಶಿಸುವ ಜನರನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ. ಕ್ರಮೇಣ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಹೆಚ್ಚಿಸಿದ್ದೇವೆ ಎಂದರು.
ಸಾರ್ಕ್ ರಾಷ್ಟ್ರಗಳಾದ ಆಫ್ಘಾನಿಸ್ತಾನದಿಂದ ಅಧ್ಯಕ್ಷ ಆಶ್ರಫ್ ಗನಿ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ, ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಮತ್ತು ಪಾಕಿಸ್ತಾನದಿಂದ ಆರೋಗ್ಯ ಸಚಿವ ಜಾಫರ್ ಮಿರ್ಜಾ ವಿಡಿಯೋ ಕಾನ್ಪರೆನ್ಸ್ ನಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


