ದೇಶ

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 

ಮಧ್ಯಪ್ರದೇಶ ರಾಜಕೀಯ ಹೈಡ್ರಾಮದ ನಡುವೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜಭವನದಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿಯಾಗಿದ್ದಾರೆ.

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 
ಮುಖ್ಯಮಂತ್ರಿ ಕಮಲ್ ನಾಥ್
Published On :

ಭೋಪಾಲ್: ಮಧ್ಯಪ್ರದೇಶ ರಾಜಕೀಯ ಹೈಡ್ರಾಮದ ನಡುವೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜಭವನದಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿಯಾಗಿದ್ದಾರೆ.

ಮಂಗಳವಾರವೇ ವಿಶ್ವಾಸಮತ ಯಾಚಿಸಬೇಕು, ಇಲ್ಲದಿದ್ದರೆ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಪರಿಗಣಿಸಬೇಕಾಗುತ್ತದೆ ಎಂದು ರಾಜ್ಯಪಾಲರು ಕಮಲ್ ನಾಥ್ ಅವರಿಗೆ ಸೂಚಿಸಿದ್ದರು. 

ಈ ಹಿಂದೆ  ರಾಜ್ಯಪಾಲರ ಪತ್ರಕ್ಕೆ ಉತ್ತರವಾಗಿ ಕಮಲ್ ನಾಥ್  ನೀಡಿರುವ ವಾದಗಳು ಆಧಾರರಹಿತವಾಗಿವೆ ಮತ್ತು ಅದರಲ್ಲಿ ಬಳಸಿದ ಭಾಷೆ ಸಂಸದೀಯವಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಮೇಲೆ ಗೌರವ ಇದ್ದರೆ ಮಾರ್ಚ್ 17 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕು, ಇಲ್ಲದಿದ್ದರೆ ನಿಮಗೆ ಬಹುಮತ ಇಲ್ಲ ಎಂಬುದು ಸಾಬೀತು ಆಗಲಿದೆ ಎಂದು ರಾಜ್ಯಪಾಲರು ಕಮಲ್ ನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.