ದೇಶ

ಕೈದಿಗಳಿಗೆ ಸೋಂಕು ಹರಡದಂತೆ ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ನೀಡಿ; ರಾಜ್ಯ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ದೇಶದ ಕಾರಾಗೃಹಗಳಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ನಿರ್ದೇಶಕ(ಕಾರಾಗೃಹ), ಎಲ್ಲಾ ಮುಖ್ಯ ಕಾರ್ಯದರ್ಶಿಗಳು ಮತ್ತು ಸಾಮಾಜಿಕ ಕಲ್ಯಾಣ ಇಲಾಖೆಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ

ಕೈದಿಗಳಿಗೆ ಸೋಂಕು ಹರಡದಂತೆ ತೆಗೆದುಕೊಂಡಿರುವ ಕ್ರಮಗಳ ಮಾಹಿತಿ ನೀಡಿ; ರಾಜ್ಯ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಸುಪ್ರೀಂಕೋರ್ಟ್
Published On :

ನವದೆಹಲಿ: ದೇಶದ ಕಾರಾಗೃಹಗಳಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ನಿರ್ದೇಶಕ(ಕಾರಾಗೃಹ), ಎಲ್ಲಾ ಮುಖ್ಯ ಕಾರ್ಯದರ್ಶಿಗಳು ಮತ್ತು ಸಾಮಾಜಿಕ ಕಲ್ಯಾಣ ಇಲಾಖೆಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ

ದೇಶದ ಜೈಲುಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳನ್ನು ಭರ್ತಿ ಮಾಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿ ಎನ್.ಎನ್. ರಾವ್ ಅವರಿದ್ದ ವಿಭಾಗೀಯ ಪೀಠ, ಜೈಲುಗಳಲ್ಲಿ ಬಹಳಷ್ಟು ಕೈದಿಗಳಿದ್ದು, ಅಲ್ಲಿ ಸೋಂಕು ತಗುಲಿದರೆ ಅಪಾಯಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.

ಸರ್ಕಾರ ಈ ಅವಕಾಶವನ್ನು ಉಪಯೋಗಿಸಿಕೊಂಡು ಕಾರಾಗೃಹಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಕೈದಿಗಳ ಸಂಖ್ಯೆಯನ್ನು ಕಡಿಮೆಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. 

ತಿಹಾರ್ ಜೈಲಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಕೈದಿಗಳು ಇರದಂತೆ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಕೈದಿಗಳಲ್ಲಿ ಸೋಂಕು ಕಂಡುಬಂದಲ್ಲಿ ಅವರನ್ನು ಪ್ರತ್ಯೇಕವಾಗಿರಿಸಿ ತಪಾಸಣೆ ನಡಸಲಾಗುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. 

ತಿಹಾರ್ ಜೈಲಿನಲ್ಲಿ ಒಂದು ವಾರ್ಡ್ ಗಳಲ್ಲಿ 40ರಿಂದ 50 ಜನರಿದ್ದು, ಒಂದು ವಾರ್ಡ್ ನಲ್ಲಿ 300ರಿಂದ 400 ಕೈದಿಗಳನ್ನು ಇರಿಸಲಾಗಿದೆ ಎಂದು ಹೇಳಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.