ಕೊರೋನಾ: ಜನಸಂದಣಿಯಿಂದ ದೂರವಿರಿ: 10 ಸಾವಿರ ಜನಗಳ ನಡುವೆ ಮಮತಾ ಬ್ಯಾನರ್ಜಿ ಭಾಷಣ!
ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಸ್ವತಃ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು ಗೊತ್ತೇ ಇದೆ. ಈಗ ಇಂಥಹದ್ದೇ ಎಡವಟ್ಟೊಂದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಮಾಡಿಕೊಂಡಿದ್ದಾರೆ.

ಕೋಲ್ಕತ್ತ: ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಸ್ವತಃ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದು ಗೊತ್ತೇ ಇದೆ. ಈಗ ಇಂಥಹದ್ದೇ ಎಡವಟ್ಟೊಂದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹ ಮಾಡಿಕೊಂಡಿದ್ದಾರೆ.
ಒಂದೆರಡು ತಿಂಗಳ ಕಾಲ ಕೊರೋನಾ ವೈರಸ್ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಜನಸಂದಣಿಯಿಂದ ದೂರವಿರಬೇಕು ಎಂದು ಮಮತಾ ಬ್ಯಾನರ್ಜಿ 10 ಸಾವಿರ ಜನಗಳ ನಡುವೆ ಮಮತ ಬ್ಯಾನರ್ಜಿ ಹೇಳಿದ್ದಾರೆ.
ಕೊರೋನಾ ವೈರಸ್ ತಡೆಗೆ ಸಲಹೆಗಳನ್ನು ರಾಜ್ಯ ಸರ್ಕಾರಗಳಿಗೆ ಕಳಿಸಿಕೊಟ್ಟಿದ್ದ ಕೇಂದ್ರ ಸರ್ಕಾರ ಹೆಚ್ಚು ಸಾರ್ವಜನಿಕ ಸಭೆಗಳು ನಡೆಯದಂತೆ ಎಚ್ಚರ ವಹಿಸಲು ಸೂಚನೆ ನೀಡಿತ್ತು. ಆದರೆ ನೇತಾಜಿ ಇಂಡೋರ್ ಸ್ಟೇಡಿಯಂ ನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯರ್ಕಮದಲ್ಲಿ ಮಾತನಾಡಿರುವ ಮಮತಾ ಬ್ಯಾನರ್ಜಿ ಸುಮಾರು 10,000 ಜನರನ್ನುದ್ದೇಶಿಸಿ ಮಾತನಾಡಿದ್ದು, ಕೇಂದ್ರ ಸರ್ಕಾರ ಕಳಿಸಿಕೊಟ್ಟಿದ್ದ ಸಲಹೆ-ಸೂಚನೆಗಳನ್ನು ವೇದಿಕೆಯಲ್ಲೇ ಓದಿ ಜನಸಂದಣಿಯಿಂದ ದೂರವಿರಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯ ಹೊರತಾಗಿಯೂ ನಾವಿಲ್ಲಿ ಸೇರಿದ್ದೇವೆ ಏಕೆಂದರೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ದಿನಗಳು ಮತ್ತೆ ಬರುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


