ಕೋವಿಡ್ -19: ಕೇರಳದಲ್ಲಿ ಮೂರು ಹೊಸ ಪ್ರಕರಣಗಳು ಪತ್ತೆ
ಕೇರಳದಲ್ಲಿ ಮೂರು ಹೊಸ ಕೊರೋನಾವೈರಸ್ ಪ್ರಕರಣಗಳು ವರದಿಯಾಗಿದೆ. ಪ್ರಸ್ತುತ ಕೇರಳದಲ್ಲಿ ಒಟ್ಟಾರೇ 24 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ತಿರುವನಂತಪುರ: ಕೇರಳದಲ್ಲಿ ಮೂರು ಹೊಸ ಕೊರೋನಾವೈರಸ್ ಪ್ರಕರಣಗಳು ವರದಿಯಾಗಿದೆ. ಪ್ರಸ್ತುತ ಕೇರಳದಲ್ಲಿ ಒಟ್ಟಾರೇ 24 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಹೊಸ ಪ್ರಕರಣಗಳೊಂದಿಗೆ ದೇಶದಲ್ಲಿ ಒಟ್ಟಾರೇ ಈ ಸೋಂಕು ತಗುಲಿದವರ ಸಂಖ್ಯೆ 117ಕ್ಕೆ ಏರಿಕೆ ಆಗಿದೆ.
ಜಾಗತಿಕವಾಗಿ 1.5 ಲಕ್ಷ ಜನರು ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದು, ಈ ಸೋಂಕು ತಡೆಗಾಗಿ ಅನೇಕ ರಾಜ್ಯಗಳು ಮುಂದಾಗಿರುವುದರಿಂದ ದೇಶಾದ್ಯಂತ ಆಘೋಷಿತ ಬಂದ್ ವಾತವಾರಣದಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗುತ್ತಿದೆ.
ಈ ಸೋಂಕು ರಾಷ್ಟ್ರದಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದಲ್ಲಿಯೂ ಹೆಚ್ಚಿನ ಸಂಖ್ಯೆಯ ಜನರು ಈ ಸೋಂಕಿಗೆ ಒಳಗಾಗಿದ್ದು, ಜನರ ರಕ್ಷಣೆ ನಿಟ್ಟಿನಲ್ಲಿ ಸರ್ಕಾರಗಳು ಕಾರ್ಯೋನ್ಮುಖವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


