ಕೊರೋನಾ ವೈರಸ್ ಭೀತಿ: ಅಫ್ಘಾನಿಸ್ತಾನ, ಫಿಲಿಪೈನ್ಸ್, ಮಲೇಷ್ಯಾದ ಪ್ರಯಾಣಿಕರಿಗೆ ಭಾರತ ನಿಷೇಧ
ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕು ದೇಶದಲ್ಲಿ ಹರಡುವುದನ್ನು ತಡೆಯಲು ಭಾರತ ಮಂಗಳವಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನವದೆಹಲಿ: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕು ದೇಶದಲ್ಲಿ ಹರಡುವುದನ್ನು ತಡೆಯಲು ಭಾರತ ಮಂಗಳವಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಅಫ್ಘಾನಿಸ್ತಾನ, ಫಿಲಿಪೈನ್ಸ್ ಹಾಗೂ ಮಲೇಷ್ಯಾದಿಂದ ಭಾರತ ಪ್ರವೇಶಿಸುವ ಪ್ರಯಾಣಿಕರ ಮೇಲೆ ಮಂಗಳವಾರ ಮಧ್ಯಾಹ್ನ ಮೂರು ಗಂಟೆಯಿಂದ ಪೂರ್ಣ ನಿಷೇಧ ವಿಧಿಸಿದೆ. ಈ ತಿಂಗಳ ೩೧ರವರೆಗೆ ಈ ನಿಷೇಧ ಆದೇಶ ಜಾರಿಯಲ್ಲಿರಲಿದ್ದು ಪರಿಸ್ಥಿತಿ ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಭಾರತ ಈಗಾಗಲೇ ಐರೋಪ್ಯ ದೇಶಗಳು, ಟರ್ಕಿ ಹಾಗೂ ಬ್ರಿಟನ್‌ನಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಷೇಧ ಹೇರಿದೆ. ಈ ಮಾರ್ಗಸೂಚಿಗಳಿಗೆ ಅನುಸಾರವಾಗಿ ಯಾವುದೇ ವಿಮಾನಯಾನ ಸಂಸ್ಥೆಗಳು ಈ ದೇಶಗಳ ಪ್ರಯಾಣಿಕರನ್ನು ಭಾರತಕ್ಕೆ ಕರೆತರಲು ಅನುಮತಿಸುವುದಿಲ್ಲ. ಮತ್ತೊಂದೆಡೆ, ಕರೋನಾದಿಂದಾಗಿ ಮಹಾರಾಷ್ಟ್ರ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ೬೪ ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದು, ದೇಶದಲ್ಲಿ ಈ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


