ಕೊರೋನಾ ವೈರಸ್ ಪ್ರತ್ಯೇಕಿಸಿದ ಜಗತ್ತಿನ 5ನೇ ರಾಷ್ಟ್ರ ಭಾರತ: WHO
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಕುರಿತು ಸಂಶೋಧನೆಯಲ್ಲಿ ಭಾರತೀಯ ವಿಜ್ಞಾನಿಗಳು ಮಹತ್ತರ ಸಾಧನೆಗೈದಿದ್ದು, ಕೊರೋನಾ ವೈರಸ್ ಪ್ರತ್ಯೇಕಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ನವದೆಹಲಿ: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಕುರಿತು ಸಂಶೋಧನೆಯಲ್ಲಿ ಭಾರತೀಯ ವಿಜ್ಞಾನಿಗಳು ಮಹತ್ತರ ಸಾಧನೆಗೈದಿದ್ದು, ಕೊರೋನಾ ವೈರಸ್ ಪ್ರತ್ಯೇಕಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಈ ಬಗ್ಗೆ ಸ್ವತಃ ವಿಶ್ವ ಆರೋಗ್ಯ ಸಂಸ್ಥೆ ಭಾರತೀಯ ವಿಜ್ಞಾನಿಗಳ ಕಾರ್ಯವನ್ನು ಶ್ಲಾಘಿಸಿದೆ. ಈ ಕುರಿತಂತೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಹೆಂಕ್ ಬೆಕೆಡಮ್ ಅವರು, ICMR ಮತ್ತು ಆರೋಗ್ಯ ಸಂಶೋಧನಾ ಇಲಾಖೆಗಳು ವೈರಸ್ನ್ನು ಪ್ರತ್ಯೇಕಗೊಳಿಸುವಲ್ಲಿ ಯಶಸ್ವಿಯಾಗಿದ್ದು ಈಗ ಭಾರತ ಸಂಶೋಧನಾ ಸಮುದಾಯದ ಭಾಗವಾಗಿ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ICMR ನ ಮುಖ್ಯಸ್ಥರು ಈ ಬಗ್ಗೆ ಮಾತನಾಡಿ.. ವೈರಸ್ನ್ನು ಪ್ರತ್ಯೇಕಿಸುವುದು ನಿಜಕ್ಕೂ ಕಷ್ಟದ ಕೆಲಸ.. ಆದರೆ ಕೆಲ ದಿನಗಳ ಹಿಂದೆ ವೈರಸ್ನ್ನು ಬೇರ್ಪಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ. ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಇಟ್ಟ ದಿಟ್ಟ ಹೆಜ್ಜೆ ಬಗ್ಗೆ WHO ಕೂಡ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ಹೇಳಿದ್ದಾರೆ.
ಆ ಮೂಲಕ ಕೊರೊನಾ ವೈರಸ್ನ್ನು ಬೇರ್ಪಡಿಸಿದ ಐದನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ. ಈ ಹಿಂದೆ ಜಪಾನ್, ಥೈಲ್ಯಾಂಡ್, ಅಮೆರಿಕಾ ಮತ್ತು ಚೀನಾ ದೇಶಗಳು ಕೊರೋನಾ ವೈರಸ್ ಅನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾಗಿದ್ದವು. ಇದೀಗ ಭಾರತವೂ ಇಂಥದ್ದೊಂದು ಸಾಧನೆಗೈಯ್ಯುವ ಮೂಲಕ ಕೊರೋನಾ ವಿರುದ್ಧ ಬಲಿಷ್ಠವಾಗಿ ಹೋರಾಡುತ್ತಿರುವ ದೇಶಗಳ ಪೈಕಿ ಒಂದಾಗಿದೆ.
ವೈರಸ್ ಪ್ರತ್ಯೇಕಿಸಿದ ಬಳಿಕ..?
ವೈರಸ್ನ್ನು ಬೇರ್ಪಡಿಸಿದ ನಂತರ ಅದರ ಮೇಲೆ ಸಂಶೋಧನೆಗಳನ್ನು ನಡೆಸಿ, ಅದು ಹೇಗೆ ಕೆಲಸ ನಿರ್ವಹಿಸುತ್ತದೆ. ಎಷ್ಟು ಪರಿಣಾಮಕಾರಿಯಾಗಿರುತ್ತದೆ, ಮತ್ತು ಅದನ್ನು ನಿರ್ನಾಮ ಮಾಡುವುದು ಹೇಗೆ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ಅಂತೆಯೇ ಅದನ್ನು ಕೊಲ್ಲಲು ಬೇಕಾದ ಔಷಧಿಯನ್ನು ಈ ಸಂಶೋಧನೆಯ ನಂತರ ತಯಾರಿಸಲು ಸಹಕಾರಿಯಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


