ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ವಿವರಣೆ ನೀಡುವಂತೆ ಕಮಲ್ ನಾಥ್ ಸರ್ಕಾರಕ್ಕೆ 'ಸುಪ್ರೀಂ' ಸೂಚನೆ, ವಿಚಾರಣೆ ಮುಂದೂಡಿಕೆ
ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ವಿಚಾರ ಸಂಬಂಧ ಬಿಜೆಪಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ನವದೆಹಲಿ: ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ವಿಚಾರ ಸಂಬಂಧ ಬಿಜೆಪಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು ಸಂಬಂಧ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಇತರೆ ಬಿಜೆಪಿ ನಾಯಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸಿಎಂ ಕಮಲ್ ನಾಥ್ ಅವರಿಗೆ ಮುಂದಿನ 48 ಗಂಟೆ ಒಳಗೆ ವಿಶ್ವಾಸಮತ ಯಾಚನೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸಿಎಂ ಕಮಲ್ ನಾಥ್ ಸರ್ಕಾರಕ್ಕೆ ಈ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿದೆ. ಅಲ್ಲದೆ ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು. ಅಂತೆಯೇ ಇಂದು ವಿಶ್ವಾಸ ಮತಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅಧಿವೇಶನವನ್ನು ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಮುಂದೂಡಿದ್ದಾರೆ. ಈಗ ವಿಶ್ವಾಸಮತಯಾಚನೆ ಮುಂದೂಡಲ್ಪಟ್ಟಿದ್ದು, ಹೀಗಾಗಿ ರಾಜೀನಾಮೆ ನೀಡಿದ 22 ಶಾಸಕರ ಮನವೊಲಿಸಲು ಸಿಎಂ ಕಮಲನಾಥ್ ಮತ್ತು ಅವರ ತಂಡಕ್ಕೆ 10 ದಿನ ಸಮಯಾವಕಾಶ ದೊರೆತಿದೆ.
ಇನ್ನು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ. ಬಿಎಸ್ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ. ಹಾಲಿ ಕಾಂಗ್ರೆಸ್ನಲ್ಲಿ ಕೇವಲ 92 ಶಾಸಕರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


