ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ
ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭುವನೇಶ್ವರ: ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಡಿ ಅಭ್ಯರ್ಥಿಗಳ ವಿರುದ್ಧ ಪ್ರತಿಪಕ್ಷಗಳ ಯಾವುದೇ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಡಿಯ ಸುಭಾಶ್ ಸಿಂಗ್, ಮುನ್ನಾ ಖನ್ನಾ, ಸುಜಿತ್ ಕುಮಾರ್ ಮತ್ತು ಮಮತಾ ಮಹಂತ ಅವರಿಗೆ ರಾಜ್ಯಸಭೆಗೆ ಒಡಿಶಾ ಚುನಾವಣಾಧಿಕಾರಿಯಾಗಿರುವ ದಶರಥಿ ಸತ್ಪತಿ ಅವರು ಆಯ್ಕೆ ಪ್ರಮಾಣ ಪತ್ರ ನೀಡಿದರು.
ವಿಧಾನಸಭೆಯಲ್ಲಿ 23 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 9 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ರಾಜ್ಯ ವಿಧಾನಸಭೆಯ 147 ಸ್ಥಾನಗಳ ಪೈಕಿ ಆಡಳಿತಾರೂಢ ಬಿಜು ಜನತಾ ದಳ(ಬಿಜೆಡಿ) 113 ಸ್ಥಾನಗಳನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


