ಕೋವಿಡ್-19: ಪುಣೆಯ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಪತ್ತೆ, ಸೋಂಕಿತ ಸಂಖ್ಯೆ 147ಕ್ಕೆ ಏರಿಕೆ
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ತನ್ನ ಕಬಂಧ ಬಾಹುಗಳು ಭಾರತದ ಹಲವು ರಾಜ್ಯಗಳಿಗೆ ವಿಸ್ತರಿಸುತ್ತಿದ್ದು, ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಕಾಣಿಸಿಕೊಂಡಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.

ನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ತನ್ನ ಕಬಂಧ ಬಾಹುಗಳು ಭಾರತದ ಹಲವು ರಾಜ್ಯಗಳಿಗೆ ವಿಸ್ತರಿಸುತ್ತಿದ್ದು, ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ವೈರಸ್ ಕಾಣಿಸಿಕೊಂಡಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.
ಫ್ರಾನ್ಸ್ ಹಾಗ ನೆದರ್ ಲ್ಯಾಂಡ್ ನಿಂದ ಬಂದ ವ್ಯಕ್ತಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರಂತೆ ಮಹಾರಾಷ್ಟ್ರದಲ್ಲಿ 38 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪುಣೆಯೊಂದರಲ್ಲಿಯೇ 19 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿಯೂ ಯುವಕನೋರ್ವನಲ್ಲಿ ವೈರಸ್ ಪತ್ತೆಯಾಗಿತ್ತು. ಇಂಗ್ಲೆಂಡ್ ನಿಂದ ಮರಳಿದ 18 ವರ್ಷದ ಯುವಕನಲ್ಲಿ ವೈರಸ್ ಪತ್ತೆಯಾಗಿದ್ದು, ಪ್ರಸ್ತುತ ಯುವಕನ್ನು ಬೆಲಿಯಾಘಾಟಾ ಐಟಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ನಡುವೆ ಸೋಂಕಿತ ಸಂಖ್ಯೆ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯು, ಭಾರತದಲ್ಲಿ ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.
122 ಮಂದಿ ಭಾರತೀಯರು ಹಾಗೂ 24 ಮಂದಿ ವಿದೇಶಿಯರು ಸೇರಿ ಒಟ್ಟು 147 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಮುಖವಾಗಿ ಮಹಾರಾಷ್ಟ್ರ ರಾಜ್ಯ ವೊಂದರಲ್ಲಿಯೇ 38 ಪ್ರಕರಣಗಳು ಪತ್ತೆಯಾಗಿದ್ದರೆ, ಕೇರಳದಲ್ಲಿ 25 ಮತ್ತು ಉತ್ತರಪ್ರದೇಶದಲ್ಲಿ 15 ಪ್ರಕರಣಗಳು ಬೆಳಕಿಗೆ ಬಂದಿವೆ.
ಇನ್ನು ಕರ್ನಾಟಕದಲ್ಲಿ 11 ಪ್ರಕರಣಗಳು ಪತ್ತೆಯಾಗಿದ್ದರೆ, ಓರ್ವ ವ್ಯಕ್ತಿ ವೈರಸ್'ಗೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ ವಿದೇಶಿ ಪ್ರಜೆ ಸೇರಿ 9 ಪ್ರಕರಣಗಳು ಪತ್ತೆಯಾಗಿದೆ ಎಂದು ತಿಳಿಸಿದೆ.
ಇನ್ನು ಕೇಂದ್ರಾಡಳಿತ ಪ್ರದೇಶ ಲಡಾಖ್ ನಲ್ಲಿ 8, ಜಮ್ಮು ಮತ್ತು ಕಾಶ್ಮೀರದಲ್ಲಿ 3 ಪ್ರಕರಣಗಳು ಪತ್ತೆಯಾಗಿದ್ದರೆ, ಒಡಿಶಾದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಈ ನಡುವೆ ವೈರಸ್ ನಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವರು ಜನರ ಪೈಕಿ 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಜಾಗತಿಕವಾಗಿ ವೈರಸ್'ಗೆ 7,500 ಮಂದಿ ಬಲಿಯಾಗಿದ್ದರೆ, 1,84,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ನಿನ್ನೆಯಷ್ಟೇ ಭಾರತದಲ್ಲಿ ವೈರಸ್'ಗೆ ಮೂರನೇ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ಇತ್ತೀಚೆಗೆ ದುಬೈನಿಂದ ಮರಳಿದ್ದ 64 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಅಲ್ಲದೆ. ದೇಶದಾದ್ಯಂತ ಹೊಸದಾಗಿ 18 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಈ ಮೂಲಕ ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. ಈ ಪೈಕಿ ಅತೀ ಹೆಚ್ಚು ಪ್ರಕರಣಗಳು ದಾಖಲಾದ ರಾಜ್ಯಗಳೆಂದರೆ, ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


