ದೇಶ

ಜಪಾನ್ ಹಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ 16 ಭಾರತೀಯರಿಗೆ ಚಿಕಿತ್ಸೆ, ಭಾರತಕ್ಕೆ ವಾಪಸ್! 

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಜಪಾನ್ ಹಡಗಿನಲ್ಲಿದ್ದ 16 ಭಾರತೀಯರನ್ನು ಚಿಕಿತ್ಸೆ ಕೊಡಿಸಿ ವಾಪಸ್ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆ ರಾಜ್ಯ ಸಚಿವರು ತಿಳಿಸಿದ್ದಾರೆ.

ಜಪಾನ್ ಹಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ 16 ಭಾರತೀಯರಿಗೆ ಚಿಕಿತ್ಸೆ, ಭಾರತಕ್ಕೆ ವಾಪಸ್! 
ಜಪಾನ್ ಹಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ 16 ಭಾರತೀಯರಿಗೆ ಚಿಕಿತ್ಸೆ, ಭಾರತಕ್ಕೆ ವಾಪಸ್!
Published On :

ನವದೆಹಲಿ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಜಪಾನ್ ಹಡಗಿನಲ್ಲಿದ್ದ 16 ಭಾರತೀಯರನ್ನು ಚಿಕಿತ್ಸೆ ಕೊಡಿಸಿ ವಾಪಸ್ ಕರೆತರಲಾಗಿದೆ ಎಂದು ವಿದೇಶಾಂಗ ಇಲಾಖೆ ರಾಜ್ಯ ಸಚಿವರು ತಿಳಿಸಿದ್ದಾರೆ.
 
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಮುರಳೀಧರನ್, ಡೈಮಂಡ್ ಪ್ರಿನ್ಸಸ್ ಕ್ರೂಸ್ ಶಿಪ್ ನಲ್ಲಿ 138 ಭಾರತೀಯರಿದ್ದರು. ಈ ಪೈಕಿ 119 ಭಾರತೀಯರನ್ನು ಫೆ.27 ರಂದು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿತ್ತು.

ಭಾರತಕ್ಕೆ ಕರೆತರುತ್ತಿದ್ದಂತೆಯೇ ಅವರನ್ನು ಹರ್ಯಾಣದ ಇಂಡಿಯನ್ ಆರ್ಮಿ ಫೆಸಿಲಿಟಿಯಲ್ಲಿ ನಿರ್ಬಂಧ ವಿಧಿಸಿ ಇರಿಸಲಾಗಿತ್ತು. ಈ ಪೈಕಿ 16 ಭಾರತೀಯರಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಅವರಿಗೆ ಜಪಾನ್ ನಲ್ಲಿಯೇ ಚಿಕಿತ್ಸೆ ಕೊಡಿಸಿ ಡಿಸ್ಚಾರ್ಜ್ ನಂತರ ಭಾರತಕ್ಕೆ ಕರೆತರಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.