ಕೊರೋನಾ ತಡೆಗೆ ಕೇಂದ್ರದ ಕಠಿಣ ಕ್ರಮ: ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಬಂದ್
ಕೊರೋನಾ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಮಾ.22 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಬಂದ್ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ.

ನವದೆಹಲಿ: ಕೊರೋನಾ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಮಾ.22 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಬಂದ್ ಮಾಡುವುದಾಗಿ ಅಧಿಕೃತವಾಗಿ ಘೋಷಿಸಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಸರ್ಕಾರದ ಅಧಿಕಾರಿಗಳು ಕೊರೋನಾ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾ.22 ರಿಂದ ಮಾ.29 ವರೆಗೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಲ್ಯಾಂಡಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಪ್ರತಿನಿಧಿಗಳು, ವೈದ್ಯರು, ಸರ್ಕಾರಿ ಉದ್ಯೋಗಿಗಳ ಹೊರತಾಗಿ 65 ವರ್ಷಗಳ ಮೇಲ್ಪಟ್ಟ ನಾಗರಿಕರೆಲ್ಲರೂ ಮನೆಯಲ್ಲೇ ಇರುವುದಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ, ಈ ಸಲಹೆ 10 ವರ್ಷದ ಒಳಗಿನ ಮಕ್ಕಳಿಗೂ ಅನ್ವಯವಾಗಲಿದೆ.
ಇದೇ ವೇಳೆ ರೈಲ್ವೆ ಹಾಗೂ ಏರ್ ಲೈನ್ ಗಳಿಗೂ ಸಲಹೆಗಳನ್ನು ರವಾನೆ ಮಾಡಿರುವ ಕೇಂದ್ರ ಸರ್ಕಾರ ವಿದ್ಯಾರ್ಥಿಗಳು, ರೋಗಿಗಳು, ವಿಶೇಷ ಚೇತನರನ್ನು ಹೊರತುಪಡಿಸಿ ಬೇರೆ ಯಾರಿಗೂ ರಿಯಾಯಿತಿ ದರದಲ್ಲಿ ಪ್ರಯಾಣ ಸೌಲಭ್ಯ ಕಲ್ಪಿಸದಂತೆ ಸೂಚನೆ ನೀದಿದೆ.
ಖಾಸಗಿ ಕಂಪನಿಗಳ ಉದ್ಯೋಗಿಗಳು ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕಾರ್ಯನಿರ್ವಹಣೆ) ಮಾಡುವುದಕ್ಕೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


