ನ್ಯಾಯಾಲಯಕ್ಕೂ ಅವರ ತಂತ್ರಗಾರಿಕೆ ತಿಳಿದಿದೆ, ನಾಳೆ ನಮಗೆ ನ್ಯಾಯದೊರೆಯಲಿದೆ: ನಿರ್ಭಯಾ ತಾಯಿ
ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.

ನವದೆಹಲಿ: ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯ ದೋಷಿಗಳು ಹೂಡುತ್ತಿರುವ ತಂತ್ರಗಾರಿಕೆ ನ್ಯಾಯಾಲಯದ ಗಮನಕ್ಕೂ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ನಿರ್ಭಾಯ ತಾಯಿ ಆಶಾದೇವಿ ಹೇಳಿದ್ದಾರೆ.
2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಆಶಾದೇವಿ ಅವರು, ನಿರ್ಭಯಾ ದೋಷಿಗಳಿಗೆ ನ್ಯಾಯಾಲಯ ಎಲ್ಲ ರೀತಿಯ ಅವಕಾಶವನ್ನೂ ನೀಡಿತು. ಆದರೆ ದೋಷಿಗಳು ಗಲ್ಲು ಶಿಕ್ಷೆಯಿಂದ ಪಾರಾಗಲು ಎಲ್ಲ ರೀತಿಯ ತಂತ್ರಗಾರಿಕೆ ಬಳಸಿದರು. ದೋಷಿಗಳ ಈ ತಂತ್ರಗಾರಿಕೆ ಇದೀಗ ನ್ಯಾಯಾಲಯದ ಗಮನಕ್ಕೆ ಬಂದಿದೆ. ಹೀಗಾಗಿ ನಾಳೆ ನಮಗೆ ನ್ಯಾಯ ದೊರೆಯಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


