ದೇಶ

ರೆಡಿಕ್ಯುಲಸ್‌: ಸಂಸದ ತೇಜಸ್ವಿ ಸೂರ್ಯ ಕಾಲೆಳೆದ ಕಾರ್ತಿ ಚಿದಂಬರಂ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಗೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅಪಹಾಸ್ಯ ಮಾಡಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಸಂಸದರು ವೈದ್ಯರು ಹಾಗೂ ಸೈನಿಕರಂತೆ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು.

ರೆಡಿಕ್ಯುಲಸ್‌: ಸಂಸದ ತೇಜಸ್ವಿ ಸೂರ್ಯ ಕಾಲೆಳೆದ ಕಾರ್ತಿ ಚಿದಂಬರಂ
ತೇಜಸ್ವಿ ಸೂರ್ಯ ಮತ್ತು ಕಾರ್ತಿ ಚಿದಂಬರಂ
Published On :

ನವದೆಹಲಿ: ಕರೋನಾ ವೈರಸ್ ಆತಂಕದಿಂದಾಗಿ ಸದನ ನಡೆಸದಂತೆ ವಿರೋಧ ಪಕ್ಷಗಳು ಗದ್ದಲ  ಡೆಸಿದರು ಸರ್ಕಾರ ಕಲಾಪ ಮುಂದುವರಿಸುತ್ತಿದೆ. 

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಗೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅಪಹಾಸ್ಯ ಮಾಡಿದ್ದಾರೆ.  ಕೊರೋನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲಾ ಸಂಸದರು ವೈದ್ಯರು ಹಾಗೂ ಸೈನಿಕರಂತೆ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಈ ಹೋಲಿಕೆ ತೀರಾ ಹಾಸ್ಯಾಸ್ಪದ ಎಂದು ರೀಟ್ವೀಟ್ ಮಾಡಿದ್ದಾರೆ.

ಕರೋನಾ ವೈರಸ್ ಹರಡದಂಂತೆ ಸಮಾಜದಲ್ಲಿ ಜನರನ್ನು ದೂರ ಇಡಲು ಜಾಗೃತೆ ವಹಿಸುವ ನಾವು ಸದನದಲ್ಲಿ ಒಟ್ಟಿಗೆ ಕುಳಿತುಕೊಳ್ಳಬೇಕಾಗಿರುವುದು ವಿಪರ್ಯಾಸ ಎಂದು  ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ,  ಸಂಸದರು ವಿಶೇಷ ವ್ಯಕ್ತಿಗಳೇನಲ್ಲ, ವೈದ್ಯರು, ಹೆಲ್ತ್ ಕೇರ್ ವರ್ಕರ್ಸ್, ಗಡಿಯಲ್ಲಿರುವ ಸೈನಿಕರು  ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಎಲ್ಲಾ ಅಡೆತೆಗಳನ್ನು ನಿವಾರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ,  ಮುಂಜಾಗ್ರತೆ ಅಗತ್ಯವೇ ಹೊರತು ಅದರಿಂದ ಆತಂಕ್ಕೊಳಗಾಗಬಾರದು ಎಂದು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.