ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಸಾವು
ತಮಿಳುನಾಡಿನ ತಿರುಪುರ ಸಮೀಪದ ಅವಿನಾಶಿ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ತಿರುಪುರ: ತಮಿಳುನಾಡಿನ ತಿರುಪುರ ಸಮೀಪದ ಅವಿನಾಶಿ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 5.30ಕ್ಕೆ ಈ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೊವಾ ಕಾರಿಗೆ ಸಿಮೆಂಟ್ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅವಿನಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಾಲೇಜ್ ಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ಈ ಏಳು ವಿದ್ಯಾರ್ಥಿಗಳು ಇನ್ನೊವಾದಲ್ಲಿ ಊಟಿಗೆ ಪ್ರವಾಸ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ರಾಜೇಶ್(21), ಸೂರ್ಯ(21), ವೆಂಕಟ್(21) ಇಳವರಸನ್(21), ವಸಂತ್(21) ಮತ್ತು ಕಾರು ಚಾಲಕ ಮಣಿಕಂಠನ್(29) ಎಂದು ಗುರುತಿಸಲಾಗಿದೆ.
ಕೊಯಮತ್ತೂರಿನಿಂದ 40 ಕಿಮೀ ದೂರದಲ್ಲಿರುವ ಅವಿನಾಶಿಯಲ್ಲಿ ಸಂಭವಿಸಿದ ಈ ದುರ್ಘಟನಾ ಸ್ಥಳಕ್ಕೆ ಕೊಯಮತ್ತೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


