ತೆಲಂಗಾಣದಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ಪತ್ತೆ: ದೇಶದಲ್ಲಿ 250ಕ್ಕೆ ಏರಿಕೆ
ತೆಲಂಗಾಣದಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ತೆಲಂಗಾಣದಲ್ಲಿನ ಇಬ್ಬರು ಇಂಡೊನೇಷ್ಯಾ ಪ್ರಜೆಗಳಲ್ಲಿ ಈ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಈ ರಾಜ್ಯದಲ್ಲಿ ಈ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ ಎಂದು ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ. ಶಂಕರ್ ತಿಳಿಸಿದ್ದಾರೆ.

ನವದೆಹಲಿ: ತೆಲಂಗಾಣದಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ. ತೆಲಂಗಾಣದಲ್ಲಿನ ಇಬ್ಬರು ಇಂಡೊನೇಷ್ಯಾ ಪ್ರಜೆಗಳಲ್ಲಿ ಈ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಈ ರಾಜ್ಯದಲ್ಲಿ ಈ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಆಗಿದೆ ಎಂದು ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ಡಾ. ಶಂಕರ್ ತಿಳಿಸಿದ್ದಾರೆ.
ಮಧ್ಯ ಪ್ರದೇಶ ಹಾಗೂ ಹಿಮಾಚಲ ಪ್ರದೇಶದಲ್ಲಿ ತಲಾ ಎರಡು ಪಾಸಿಟಿವ್ ಪ್ರಕರಣಗಳು ಮೊದಲ ಬಾರಿಗೆ ದೃಢಪಟ್ಟಿದೆ.
ಇದಕ್ಕೂ ಮುನ್ನ ಮಹಾರಾಷ್ಟ್ರದಲ್ಲಿ ಈ ಸೋಂಕು ತಗುಲಿದವರ ಸಂಖ್ಯೆ 52ಕ್ಕೆ ಏರಿಕೆ ಆದ ಹಿನ್ನೆಲೆಯಲ್ಲಿ ಮುಂಬೈ, ಪುಣೆ, ಪಿಂಪ್ರಿ- ಚಿಂಚ್ ವಾಡ್ ಮತ್ತು ನಾಗ ಪುರ ನಗರ ವ್ಯಾಪ್ತಿಯಲ್ಲಿ ಎಲ್ಲಾ ಖಾಸಗಿ ಅಂಗಡಿ, ಕಚೇರಿಗಳನ್ನು ಮಾರ್ಚ್ 31ರವರೆಗೂ ನಿರ್ಬಂಧಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ ಈ ಸೋಂಕು ತಗುಲಿದವರ ಸಂಖ್ಯೆ ದೇಶದಲ್ಲಿ 250 ಕ್ಕೆ ಏರಿಕೆ ಆಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶದ ವಿವಿಧ ಕಡೆಗಳಲ್ಲಿ ಹೊಸದಾಗಿ 58 ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


