ದೇಶ

ಪಂಜಾಬ್: 3 ವ್ಯಕ್ತಿಗಳಲ್ಲಿ ದೃಢಪಟ್ಟ ವೈರಸ್. ಭಾರತದಲ್ಲಿ ಸೋಂಕಿತರ ಸಂಖ್ಯೆ 280ಕ್ಕೆ ಏರಿಕೆ

ದೇಶದಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ನಡುವಲ್ಲೇ ಪಂಜಾಬ್ ರಾಜ್ಯದಲ್ಲಿ ಮೂವರು ವ್ಯಕ್ತಿಗಳಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 280ಕ್ಕೆ ಏರಿಕೆಯಾಗಿದೆ.

ಪಂಜಾಬ್: 3 ವ್ಯಕ್ತಿಗಳಲ್ಲಿ ದೃಢಪಟ್ಟ ವೈರಸ್. ಭಾರತದಲ್ಲಿ ಸೋಂಕಿತರ ಸಂಖ್ಯೆ 280ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ನಡುವಲ್ಲೇ ಪಂಜಾಬ್ ರಾಜ್ಯದಲ್ಲಿ ಮೂವರು ವ್ಯಕ್ತಿಗಳಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 280ಕ್ಕೆ ಏರಿಕೆಯಾಗಿದೆ. 

72 ಹಾಗೂ 69 ವರ್ಷದ ಇಬ್ಬರು ವೃದ್ಧ ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರೂ ಮಹಿಳೆಯರು ಸಹೋದರಿಯರಾಗಿದ್ದಾರೆಂದು ಹೇಳಲಾಗುತ್ತಿದೆ. 

ಇಬ್ಬರೂ ಈ ಮೊದಲು ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮನವಿ ಮೇಲೆಗೆ ನಾಗರೀಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಂತೆ 25 ವರ್ಷದ ಮಹಿಳೆಯೊಬ್ಬರಲ್ಲೂ ಸೋಂಕು ದೃಢಪಟ್ಟಿದ್ದು, ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.