ದೇಶ

ಕೊರೋನಾ ವೈರಸ್ ಪೀಡಿತ ಇಟಲಿಯಿಂದ 263 ಭಾರತೀಯರ ರಕ್ಷಣೆ; ಐಟಿಬಿಪಿ ಕ್ವಾರಂಟೈನ್ ನಲ್ಲಿ ತೀವ್ರ ವೈದ್ಯಕೀಯ ನೀಗಾ!

ಮಾರಕ ಕೊರೋನಾ ವೈರಸ್ ಗೆ ಅತೀ ಹೆಚ್ಚು ಬಲಿಯಾಗಿರುವ ಇಟಲಿಯಲ್ಲಿ ಅಪಾಯಕ್ಕೆ ಸಿಲುಕಿದ್ದ 263 ಭಾರತೀಯರನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಸ್ ಕರೆತರಲಾಗಿದೆ.

ಕೊರೋನಾ ವೈರಸ್ ಪೀಡಿತ ಇಟಲಿಯಿಂದ 263 ಭಾರತೀಯರ ರಕ್ಷಣೆ; ಐಟಿಬಿಪಿ ಕ್ವಾರಂಟೈನ್ ನಲ್ಲಿ ತೀವ್ರ ವೈದ್ಯಕೀಯ ನೀಗಾ!
ಇಟಲಿಯಿಂದ 263 ಭಾರತೀಯರ ರಕ್ಷಣೆ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಗೆ ಅತೀ ಹೆಚ್ಚು ಬಲಿಯಾಗಿರುವ ಇಟಲಿಯಲ್ಲಿ ಅಪಾಯಕ್ಕೆ ಸಿಲುಕಿದ್ದ 263 ಭಾರತೀಯರನ್ನು ರಕ್ಷಣೆ ಮಾಡಿ ಭಾರತಕ್ಕೆ ವಾಪಸ್ ಕರೆತರಲಾಗಿದೆ.

ಕೊರೊನಾ ವೈರಸ್‌ನಿಂದಾಗಿ ಜಗತ್ತಿನಲ್ಲೇ ಅತೀ ಹೆಚ್ಚು ಸಾವು ಕಂಡಿರುವ ಇಟಲಿಯಿಂದ 263 ಮಂದಿ ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನವು ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣ ತಲುಪಿದ್ದು, ಎಲ್ಲ ಭಾರತೀರನ್ನು ಐಟಿಬಿಪಿ ಕ್ವಾರಂಟೈನ್ ಪ್ರದೇಶದಲ್ಲಿ 14 ದಿನಗಳ ಕಾಲ ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಇಟಲಿಯ ರೋಮ್ ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಬೆಳಿಗ್ಗೆ 9.15ಕ್ಕೆ ದೆಹಲಿಗೆ ಬಂದಿಳಿದಿದ್ದು, ಭಾರತ ಸರ್ಕಾರವು ಅಲ್ಲಿಂದ ಸುರಕ್ಷಿತವಾಗಿ ಕರೆತಂದವರಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದಾರೆ. ಅವರೆಲ್ಲರನ್ನೂ ಇಂಡೋ-ಟಿಬೆಟಿಯನ್ ಗಡಿ ಪೊಲೀಸರ ಮುಂದಾಳತ್ವದಲ್ಲಿ ಛಾವ್ಲಾದಲ್ಲಿ ಏರ್ಪಡಿಸಲಾಗಿರುವ ಕ್ವಾರಂಟೈನ್ ಕೇಂದ್ರಕ್ಕೆ ರವಾನಿಸಲಾಗಿದೆ. ಸೋಂಕಿನಿಂದಾಗಿ ವಿದೇಶದಿಂದ ಬಂದವರನ್ನು ಈಗಿನ ನಿಯಮಾವಳಿ ಪ್ರಕಾರ, ತಪಾಸಣೆ ನಡೆಸಲಾಗುತ್ತದೆ ಮತ್ತು 14 ದಿನಗಳ ಕಡ್ಡಾಯ ಪ್ರತ್ಯೇಕ ವಾಸಕ್ಕೆ ಸೂಚಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.