ಪಕ್ಷ ಸೇರಿದ 22 ಶಾಸಕರಿಗೂ ಬಿಜೆಪಿ ಟಿಕೆಟ್: ಜ್ಯೋತಿರಾದಿತ್ಯ ಸಿಂಧಿಯಾ
ಮುಖ್ಯಮಂತ್ರಿ ಕಮಲ್ನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್ನ ರೆಬೆಲ್ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಕಮಲ್ನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್ನ ರೆಬೆಲ್ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ 22 ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರೆಲ್ಲರಿಗೂ ಪಕ್ಷದಿಂ ಮುಂಬರುವ ವಿಧಾನಸಭೆ ಚುನಾವಣೆಗೆ ಅವರಿಗೆಲ್ಲಾ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ ಎೆಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಮಾರ್ಚ್ 10ನೇ ತಾರೀಕಿನಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಬಳಿಕ ಇವರು ಬಿಜೆಪಿ ಸೇರಿದ ನಂತರ ಸಿಂಧಿಯಾರನ್ನು ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು.
ಇವರ ರಾಜೀನಾಮೆಯಿಂದ 15 ತಿಂಗಳ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಈ ಮೂಲಕ ಮಧ್ಯಪ್ರದೇಶ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


