ಪ್ರಧಾನಿ ಮೋದಿ ಕರೆಗೆ ಚಿಂದಿ ಆಯುವವನ ಮನ ಮಿಡಿಯುವ ಚಪ್ಪಾಳೆ, ವಿಡಿಯೋ!
ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಂದಡಿಯಾಗಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಕಂಡು ಕೇಳರಿಯದ ರೀತಿಯಲ್ಲಿ ದೇಶದ ಜನತೆ ಸ್ಪಂದನೆ ನೀಡಿದ್ದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಂದಡಿಯಾಗಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಕಂಡು ಕೇಳರಿಯದ ರೀತಿಯಲ್ಲಿ ದೇಶದ ಜನತೆ ಸ್ಪಂದನೆ ನೀಡಿದ್ದರು.
ನರೇಂದ್ರ ಮೋದಿ ಅವರು ಇಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದು ಸಂಜೆ 5 ಗಂಟೆಗೆ ಭಾರತೀಯರ ಆರೋಗ್ಯ ಹಾಗೂ ಸುರಕ್ಷತೆಗಾಗಿ ಶ್ರಮಿಸುತ್ತಿರುವ ವೈದ್ಯರು, ದಾದಿಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಚಪ್ಪಾಳೆ ತಟ್ಟುವ ಮೂಲಕ ಕೃತಜ್ಞತೆ ಸಲ್ಲಿಸಿ ಎಂದು ಹೇಳಿದ್ದರು.
ಅದೇ ರೀತಿ ಇಂದು ಸಂಜೆ 5 ಗಂಟೆ ಸುಮಾರಿಗೆ ದೇಶಾದ್ಯಂತ ಜನತೆ ತಮ್ಮ ಮನೆಗಳ ಮುಂದೆ ಜಾಗಟೆ, ಶಂಖ, ತಮಟೆ, ಚಪ್ಪಾಳೆ ಮತ್ತು ಗಂಟೆ ಬಾರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದ್ದರು. ಇನ್ನು ಬಾಲಿವುಡ್ ಗಣ್ಯರಿಂದ ಸಾಮಾನ್ಯರು ಸಹ ಚಪ್ಪಾಳೆ ತಟ್ಟಿದ್ದರು. ಈ ಚಪ್ಪಾಳೆಯಲ್ಲಿ ಚಿಂದಿ ಆಯುವ ವ್ಯಕ್ತಿಯೋರ್ವನ ಚಪ್ಪಾಳೆ ಇಡೀ ದೇಶದ ಗಮನ ಸೆಳೆದಿದೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿ ಈ ಚಪ್ಪಾಳೆಗೆ ಬೆಲೆ ಕಟ್ಟಲಾಗದು ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


